Publish Date: Fri, 07 Jul 2023 (09:20 IST)
Updated Date: Fri, 07 Jul 2023 (10:01 IST)
ಕಲಬುರಗಿ : ನಾಲ್ವರು ಅಪ್ರಾಪ್ತ ಬಾಲಕರಿಂದಲೇ 9 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರವಾಗಿರುವ ಆಘಾತಕಾರಿ ಘಟನೆ ಕಲಬುರಗಿ ನಗರದ ಮಹಿಳಾ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಬುಧವಾರ ಮಧ್ಯಾಹ್ನ ನಡೆದಿರುವ ಘಟನೆ ಇದೀಗ ಬೆಳಕಿಗೆ ಬಂದಿದೆ. ಅಪ್ರಾಪ್ತ ಬಾಲಕರು ಬಾಲಕಿಯನ್ನು ಮನೆ ಮೇಲಿನ ಟೆರೆಸ್ಗೆ ಕರೆದುಗೊಂಡು ಹೋಗಿ ಅತ್ಯಾಚಾರ ಎಸಗಿದ್ದಾರೆ.
ಅಸ್ವಸ್ಥಳಾದ ಬಾಲಕಿಯನ್ನು ಇದೀಗ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ ಬಗ್ಗೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.