Select Your Language

Notifications

webdunia
webdunia
webdunia
webdunia

1.14 ಲಕ್ಷ ಫಲಾನುಭವಿಗಳಿಗೆ 900 ಕೋಟಿ ರೂ. ಹಣ ಬಿಡುಗಡೆ. ಸಿಎಂ ಬೊಮ್ಮಾಯಿ

900 crores to 1.14 lakh beneficiaries. Release of funds
bangalore , ಶನಿವಾರ, 11 ಮಾರ್ಚ್ 2023 (18:26 IST)
ಸಿಎಂ  ಬೊಮ್ಮಾಯಿ ಅವರು ಹಿಂದುಳಿದ ವರ್ಗಗಳ ವಿವಿಧ ನಿಗಮಗಳ ವತಿಯಿಂದ 1.14 ಲಕ್ಷ   ಫಲಾನುಭವಿಗಳಿಗೆ  900  ಕೋಟಿ ರೂ.ಗಳನ್ನು  ಇಂದು ಬಿಡುಗಡೆ ಮಾಡಿದರು. ವಿಧಾನಸೌಧದ ಬೃಹತ್ ಮೆಟ್ಟಿಲುಗಳ ಮೇಲೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವ್ಯಾಪ್ತಿಯ ವಿವಿಧ ಕಟ್ಟಡ ಕಾಮಗಾರಿಗಳ ಶಂಕುಸ್ಥಾಪನೆ ನೆರವೇರಿಸಿ  ವಿವಿಧ ಅಭಿವೃದ್ಧಿ ನಿಗಮದ ಫಲಾನುಭವಿಗಳಿಗೆ ಸವಲತ್ತುಗಳನ್ನು ವಿತರಿಸಿ ಮಾತನಾಡಿದ ಅವರು, ಯಾರಿಗೋಸ್ಕರ ಈ ಶಕ್ತಿ ಸೌಧ ಕಟ್ಟಿದ್ದಾರೆ ಅವರು ಸರ್ಕಾರದ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು ಅದರ ಲಾಭವನ್ನು ಪಡೆಯುವುದು  ವ್ಯವಸ್ಥೆ ನಿಜವಾದ ಪ್ರಜಾಪ್ರಭುತ್ವದ ವ್ಯವಸ್ಥೆಯಾಗಿದೆ…ಸರ್ಕಾರ ಜನರಿಂದ ಸ್ಥಾಪಿತವಾಗಿದ್ದು, ಇದರ ಅರಿವಿನಿಂದ ಈ ಸೌಧದಲ್ಲಿ ಕೆಲಸ ಮಾಡಬೇಕು.  ನ್ಯಾಯ ಕೊಡುವ ಭ್ರಮೆ ಹುಟ್ಟಿಸುವುದರಿಂದ ಬದುಕು ಬಂಗಾರವಾಗೋಲ್ಲ. ಹುಸಿ  ಭರವಸೆಯನ್ನ ಕೊಟ್ಟು  ನ್ಯಾಯವನ್ನು ನೀಡಲಾಗದು. ವಸ್ತುನಿಷ್ಠವಾಗಿ ಬದುಕಿನಲ್ಲಿ ಸ್ವಾಭಿಮಾನ ಬದುಕನ್ನ ಬದಕಲು ಸಾಧ್ಯವೆಂದು ಮನಗಂಡು ಸರ್ಕಾರ   ಕಾರ್ಯಕ್ರಮ ರೂಪಿಸಿದಾಗ ಮಾತ್ರ ಬದಲಾವಣೆ  ಸಾಧ್ಯ ಹಿಂದುಳಿದವರ  ಬದುಕು ಹಸನಾದಾಗ ಪ್ರಜಾಪ್ರಭುತ್ವದ ಗೆಲುವು ಆಗುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ರು

Share this Story:

Follow Webdunia kannada

ಮುಂದಿನ ಸುದ್ದಿ

Drink & Drive ಬಗ್ಗೆ ಟ್ರಾಫಿಕ್ ಪೊಲೀಸರ ಸ್ಪೆಷಲ್ ಡ್ರೈ