Select Your Language

Notifications

webdunia
webdunia
webdunia
Wednesday, 16 April 2025
webdunia

ಸಹಕಾರಿ ಸಂಘಗಳ 9448 ಕೋಟಿ ರೂ. ಚಾಲ್ತಿ ಸಾಲ ಮನ್ನಾ

ಸಹಕಾರಿ ಸಂಘ
ಬೆಂಗಳೂರು , ಶುಕ್ರವಾರ, 10 ಆಗಸ್ಟ್ 2018 (12:35 IST)
ಸಹಕಾರಿ ಬ್ಯಾಂಕಿನ 10-7-2018ರ ವರೆಗಿನ ರೈತರ 1 ಲಕ್ಷ ರೂ. ವರೆಗಿನ ಚಾಲ್ತಿ ಸಾಲ ಸಂಪೂರ್ಣ ಮನ್ನಾ ಮಾಡಲು   ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ತಿಳಿಸಿದ್ದಾರೆ.  ಒಟ್ಟು 10,734 ಕೋಟಿ ಸಾಲದಲ್ಲಿ 9448 ಕೋಟಿ ರೂ. ಸಾಲ ಮನ್ನಾ ಆಗಲಿದೆ. ಇದರಿಂದ ಸಹಕಾರಿ ಸಂಘಗಳ ಸದಸ್ಯರಾಗಿರುವ 22 ಲಕ್ಷ ರೈತರಲ್ಲಿ 20.38 ಲಕ್ಷ ರೈತರಿಗೆ ಅನುಕೂಲವಾಗಲಿದೆ. 

ಈ ಸಾಲ ಮನ್ನಾಕ್ಕೆ ಹಣದ ಕೊರತೆ ಇರುವುದಿಲ್ಲ. ಸಾಲ ನವೀಕರಣ ಸಂದರ್ಭದಲ್ಲಿ ಸಹಕಾರ ಇಲಾಖೆ ಪ್ರತಿ ತಿಂಗಳು ಸಲ್ಲಿಸುವ ಬೇಡಿಕೆಗೆ ಅನುಗುಣವಾಗಿ ಹಣಕಾಸು ಇಲಾಖೆ ಅನುದಾನ ಬಿಡುಗಡೆ ಮಾಡಲಿದೆ ಎಂದು ತಿಳಿಸಿದರು. ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಎರಡನೇ ಹಂತವಾಗಿ ರಾಷ್ಟ್ರೀಕೃತ ಬ್ಯಾಂಕುಗಳಲ್ಲಿನ 6500 ಕೋಟಿ ರೂ. ಗಳ ಸಾಲ ಮನ್ನಾಕ್ಕೆ ಸಂಬಂಧಿಸಿದಂತೆ ತೀರ್ಮಾನ ಕೈಗೊಳ್ಳಲಿದೆ. ಈ ಕುರಿತು ಈಗಾಗಲೇ ಅಗತ್ಯ ಪ್ರಕ್ರಿಯೆಗಳು ಪ್ರಾರಂಭವಾಗಿದ್ದು, ಬ್ಯಾಂಕರುಗಳ ಜೊತೆ ಚರ್ಚಿಸಲಾಗುತ್ತಿದೆ ಎಂದು ತಿಳಿಸಿದರು. ಬಹುಶಃ ಸಾಲ ಮನ್ನಾದ ಪ್ರಕ್ರಿಯೆ 4 ವರ್ಷಗಳಿಗೆ ಬದಲಾಗಿ ಮುಂದಿನ ವರ್ಷವೇ ಪೂರ್ಣಗೊಳ್ಳಬಹುದು ಎಂಬ ಆಶಾಭಾವವನ್ನು ಮುಖ್ಯಮಂತ್ರಿ  ವ್ಯಕ್ತಪಡಿಸಿದರು.

ಸಾಲಮನ್ನಾ ಕುರಿತ ಮಾರ್ಗಸೂಚಿಗಳ ಬಗ್ಗೆಯೂ ಸಂಪುಟ ಸಭೆಯಲ್ಲಿ ಚರ್ಚೆಯಾಗಿದ್ದು. ಒಂದು ಕುಟುಂಬಕ್ಕೆ ಒಂದು ಲಕ್ಷ ರೂ. ವರೆಗಿನ ಸಾಲ ಮನ್ನಾ ಎಂಬ ಅಂಶವನ್ನು ಕೈಬಿಡಲಾಗಿದೆ ಎಂದು ತಿಳಿಸಿದರು. 2018 ಫೆಬ್ರುವರಿಯಲ್ಲಿ ಮಂಡಿಸಲಾದ ಲೇಖಾನುದಾನ ಆಯವ್ಯಯದಲ್ಲಿನ ಯೋಜನೆಗಳನ್ನು ಕೈಬಿಟ್ಟಿಲ್ಲ ಎಂದು ಸ್ಪಷ್ಟಪಡಿಸಿದರು. 




Share this Story:

Follow Webdunia kannada

ಮುಂದಿನ ಸುದ್ದಿ

ನಾಟಿ ಮಾಡಲು ಕೂಲಿಗೆ ಬನ್ನಿ ಎಂದು ಸಿಎಂ ಎಚ್ ಡಿಕೆಗೇ ಆಹ್ವಾನ ನೀಡಿದ ರೈತ!