ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 96 ಕೊರೊನಾ ಸೋಂಕು ಪ್ರಕರಣಗಳು ದೃಢಪಟ್ಟಿದ್ದು, ಯಾವುದೇ ಸಾವು ಪ್ರಕರಣ ವರದಿಯಾಗಿಲ್ಲ. ರಾಜ್ಯ ಆರೋಗ್ಯ ಇಲಾಖೆ ಶನಿವಾರ ನೀಡಿದ ಮಾಹಿತಿ ಪ್ರಕಾರ ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 1868ಕ್ಕೆ ಇಳಿಕೆಯಾಗಿದ್ದು, ಪಾಸಿಟಿವಿಟಿ ಪ್ರಮಾಣ ಶೇ.0.54ಕ್ಕೆ ಇಳಿಕೆಯಾಗಿದೆ.