Publish Date: Sun, 26 Nov 2023 (14:20 IST)
Updated Date: Sun, 26 Nov 2023 (14:44 IST)
ಸಿದ್ಧಗಂಗಾ ಶ್ರೀಗಳ ಬಳಿ ಮಾಜಿ ಸಚಿವ ವಿ.ಸೋಮಣ್ಣ ಬೇಸರ ವ್ಯಕ್ತಪಡಿಸಿದ ವಿಚಾರ ಕುರಿತು ವಿಪಕ್ಷ ನಾಯಕ ಆರ್.ಅಶೋಕ್ ಪ್ರತಿಕ್ರಿಯಿಸಿದ್ದಾರೆ.
ಚಿತ್ರದುರ್ಗದಲ್ಲಿ ಮಾತನಾಡಿದ ಅವರು, ನಾನು ಸಹ ಎರಡು ಕ್ಷೇತ್ರಗಳಲ್ಲಿ ಚುನಾವಣೆಗೆ ಸ್ಪರ್ಧಿಸಿದ್ದೆ. ಈಗ ಮಾಜಿ ಶಾಸಕ C.T.ರವಿ, ಮಾಜಿ ಸಚಿವ ರಮೇಶ ಜಾರಕಿಹೊಳಿ ಅಸಮಾಧಾನ ಸರಿಪಡಿಸಲಾಗಿದೆ.
ಶೇ.98ರಷ್ಟು ಅಸಮಾಧಾನ ಸರಿಪಡಿಸಲಾಗಿದೆ.. ಇನ್ನು ಶೇ.2 ರಷ್ಟು ಅಸಮಾಧಾನ ಶಮನ ಬಾಕಿಯಿದೆ.. ಮಾಜಿ ಸಚಿವ ವಿ.ಸೋಮಣ್ಣ, ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅಸಮಾಧಾನ ಸರಿಪಡಿಸಬೇಕಿದೆ ಎಂದರು.