Select Your Language

Notifications

webdunia
webdunia
webdunia
webdunia

ವಿದ್ಯಾರ್ಥಿಗಳಿಗಾಗಿ 99.74 ರಷ್ಟು ಪಠ್ಯ ಪುಸ್ತಕಗಳ ಮುದ್ರಣ

ವಿದ್ಯಾರ್ಥಿಗಳಿಗಾಗಿ 99.74 ರಷ್ಟು ಪಠ್ಯ ಪುಸ್ತಕಗಳ ಮುದ್ರಣ
bangalore , ಬುಧವಾರ, 6 ಅಕ್ಟೋಬರ್ 2021 (21:14 IST)
ರಾಜ್ಯದ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳ ವಿದ್ಯಾರ್ಥಿಗಳಿಗೆ ಒದಗಿಸಲು ಶೇಕಡಾ 99.74ರಷ್ಟು ಪಠ್ಯಪುಸ್ತಕಗಳ ಮುದ್ರಣ ಕಾರ್ಯ ಪೂರ್ಣಗೊಂಡಿದೆ ಎಂದು ರಾಜ್ಯ ಸರ್ಕಾರ ಹೈಕೋಟ್೯ ಗೆ ಮಾಹಿತಿ ನೀಡಿದೆ.
ಸರ್ಕಾರಿ ಶಾಲೆಗಳ ಸುಧಾರಣೆಗೆ ಸಂಬಂಧಿಸಿದಂತೆ ನಗರದ ಸಂಜೀವ್ ನರೈನ್ ಮತ್ತಿತರರು ಸಲ್ಲಿಸಿದ್ದ ಪಿಐಎಲ್ ಅರ್ಜಿಯನ್ನು ಹಂಗಾಮಿ ಸಿಜೆ ಎಸ್​​ಸಿ ಶರ್ಮಾ ನೇತತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.
ಈ ವೇಳೆ ಸರ್ಕಾರಿ ವಕೀಲರು ಮಾಹಿತಿ ನೀಡಿ, ಕರ್ನಾಟಕ ಪಠ್ಯಪುಸ್ತಕ ಸೊಸೈಟಿ ಸಲ್ಲಿಸಿರುವ ತಾಜಾ ಮಾಹಿತಿಯಂತೆ, 2021-22ನೇ ಶೈಕ್ಷಣಿಕ ವರ್ಷಕ್ಕೆ ಪಠ್ಯಪುಸ್ತಕ ಮುದ್ರಣ ಕಾರ್ಯ ಸಮರೋಪಾದಿಯಲ್ಲಿ ನಡೆದಿದೆ. 1ರಿಂದ 10ನೇ ತರಗತಿವರೆಗಿನ ಪಠ್ಯಪುಸ್ತಕಗಳ ಮುದ್ರಣ ಶೇ.99.74ರಷ್ಟು ಪೂರ್ಣಗೊಂಡಿದೆ. ಪುಸ್ತಕಗಳನ್ನು ಶಾಲೆಗಳಿಗೆ ಪೂರೈಕೆ ಮಾಡುವ ಕೆಲಸವೂ ಭರದಿಂದ ಸಾಗಿದೆ ಎಂದರು.
ಹೇಳಿಕೆ ದಾಖಲಿಸಿಕೊಂಡ ಪೀಠ, ಎರಡು ವಾರಗಳಲ್ಲಿ ಪಠ್ಯಪುಸ್ತಕ ಮುದ್ರಣ ಮತ್ತು ಪೂರೈಕೆ ಕಾರ್ಯ ಪೂರ್ಣಗೊಳಿಸಿ ಆ ಕುರಿತಂತೆ ಪ್ರಮಾಣಪತ್ರ ಸಲ್ಲಿಸಿ ಎಂದು ನಿರ್ದೇಶಿಸಿ ವಿಚಾರಣೆಯನ್ನು ಅ.23ಕ್ಕೆ ಮುಂದೂಡಿತು.

Share this Story:

Follow Webdunia kannada

ಮುಂದಿನ ಸುದ್ದಿ

ಮಕ್ಕಳನ್ನು ಖರೀದಿಸಿ ತಮಿಳುನಾಡು ಸೇರಿದಂತೆ ವಿವಿಧೆಡೆಗಳಲ್ಲಿ ಮಾರಾಟ