Publish Date: Sun, 26 Jun 2022 (18:12 IST)
Updated Date: Sun, 26 Jun 2022 (18:16 IST)
ಮಹಾ ವಿಕಾಸ್ ಅಘಾಡಿ ಸರ್ಕಾರದ ವಿರುದ್ದ ಬಂಡಾಯವೆದ್ದು ದೂರದ ಗುವಾಹಟಿಯಲ್ಲಿ ತಂಗಿರುವ ರೆಬೆಲ್ ಶಾಸಕರು ಇನ್ನೆರಡು ದಿನಗಳಲ್ಲಿ ಸರ್ಕಾರ ರಚನೆಗೆ ಹಕ್ಕು ಮಂಡಿಸಲಿದ್ದಾರೆ ಎಂದು ತಿಳಿದು ಬಂದಿದೆ.
ಭಾನುವಾರ ಸಭೆ ಸೇರಿದ ರೆಬೆಲ್ ಶಾಸಕರು ಇನ್ನೆರಡು ದಿನಗಳಲ್ಲಿ ಮುಂಬೈಗೆ ತಲುಪಿ ನಂತರ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸುವುದರ ಬಗ್ಗೆ ಸುಧೀರ್ಘವಾಗಿ ಚರ್ಚೆ ನಡೆಸಲಿದ್ದಾರೆ ಎಂದು ವರದುಯಾಗಿದೆ.