Publish Date: Sat, 05 Aug 2023 (07:48 IST)
Updated Date: Sat, 05 Aug 2023 (08:35 IST)
ಬೆಂಗಳೂರು : ಬೆಂಗಳೂರಿನಲ್ಲಿ ಅಮಾನವೀಯ ಘಟನೆಯೊಂದು ನಡೆದಿದೆ. ಶಾಲೆಯಲ್ಲೇ 10 ವರ್ಷದ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಲಾಗಿದೆ. ವರ್ತೂರು ಸಮೀಪದ ಖಾಸಗಿ ಶಾಲೆಯೊಂದರಲ್ಲಿ ಘಟನೆ ನಡೆದಿದ್ದು ವರ್ತೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಶಾಲಾ ಸಂಸ್ಥಾಪಕ ಮತ್ತು ಪ್ರಾಂಶುಪಾಲನಾಗಿರುವ ವ್ಯಕ್ತಿಯೇ ಕೃತ್ಯ ಎಸಗಿರುವ ಆರೋಪ ಕೇಳಿ ಬಂದಿದೆ. ನಿನ್ನೆ(ಆ.03) ಎಂದಿನಂತೆ 10 ವರ್ಷದ ವಿದ್ಯಾರ್ಥಿನಿ ಶಾಲೆಗೆ ತೆರಳಿದ್ದಳು. ಶಾಲೆಗೆ ಬಂದ ವಿದ್ಯಾರ್ಥಿನಿಯನ್ನು ಕಂಡ ಕಾಮುಕ ಪ್ರಾಂಶುಪಾಲ ವಿದ್ಯಾರ್ಥಿನಿಯನ್ನು ಖಾಲಿ ರೂಮಿಗೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾನೆ.
ಮನೆಗೆ ಬಂದ ಮಗಳು ನೋವು ತಾಳದೆ ಒದ್ದಾಡಿದನ್ನು ಕಂಡ ಪೋಷಕರು ಮಗಳ ಬಳಿ ವಿಚಾರಿಸಿ ತಕ್ಷಣ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಿದ್ದಾರೆ. ಈ ವೇಳೆ ಕೃತ್ಯ ಬಯಲಾಗಿದೆ. ವರ್ತೂರು ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.