Select Your Language

Notifications

webdunia
webdunia
webdunia
webdunia

ಸ್ವಂತ ತಂದೆಯಿಂದಲೇ 12 ವಯಸ್ಸಿನ ಮಗಳ ಮೇಲೆ ನಿರಂತರ ಅತ್ಯಾಚಾರ!

ಸ್ವಂತ ತಂದೆಯಿಂದಲೇ 12 ವಯಸ್ಸಿನ ಮಗಳ ಮೇಲೆ ನಿರಂತರ ಅತ್ಯಾಚಾರ!
ಬೀದರ್ , ಮಂಗಳವಾರ, 1 ಆಗಸ್ಟ್ 2023 (12:50 IST)
ಬೀದರ್ : ತಂದೆಯಿಂದಲೇ 12 ವರ್ಷ ವಯಸ್ಸಿನ ಮಗಳ ಮೇಲೆ ನಿರಂತರ ಅತ್ಯಾಚಾರ ನಡೆದಿರುವ ಪೈಶಾಚಿಕ ಕೃತ್ಯ ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಗ್ರಾಮವೊಂದರಲ್ಲಿ ಬೆಳಕಿಗೆ ಬಂದಿದೆ.
 
ಮನೆಯಲ್ಲಿ ಎಲ್ಲರೂ ನಿದ್ದೆಗೆ ಜಾರಿದ ಮೇಲೆ ವ್ಯಕ್ತಿ ತನ್ನ ಮಗಳ ಮೇಲೆಯೇ ಅತ್ಯಾಚಾರ ಮಾಡುತ್ತಿದ್ದ. ಸತತ ಒಂದು ವರ್ಷಗಳಿಂದ ನಿರಂತರ ಅತ್ಯಾಚಾರ ಮಾಡುತ್ತಿದ್ದ. ಈ ವಿಚಾರ ಯಾರಿಗಾದರು ಹೇಳಿದರೆ ಕೊಲ್ಲುವುದಾಗಿ ಮಗಳಿಗೆ ಬೆದರಿಕೆ ಹಾಕಿದ್ದ. 

ಬಾಲಕಿಯ ಅಜ್ಜಿ ಕೈಗೆ ರೆಡ್ಹ್ಯಾಂಡ್ ಆಗಿ ಸಿಕ್ಕಿ ಬಿದ್ದಾಗ ಪ್ರಕರಣ ಬೆಳಕಿಗೆ ಬಂದಿದೆ. ಸಂತ್ರಸ್ತೆ ತಂದೆಯ ವಿರುದ್ಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆತನನ್ನು ಜೈಲಿಗಟ್ಟಿದ್ದಾರೆ.

 

Share this Story:

Follow Webdunia kannada

ಮುಂದಿನ ಸುದ್ದಿ

ಕೇದಾರನಾಥ ಯಾತ್ರೆಗೆ ತೆರಳಿದ್ದ ಯುವಕ ಸಾವು