Webdunia - Bharat's app for daily news and videos

Install App

ರಾಜಧಾನಿಯಲ್ಲಿ 16 ವರ್ಷದ ಅಪ್ರಾಪ್ತ ಬಾಲಕಿಗೆ ಹಾಡಹಗಲೇ ಕಿರುಕುಳ

Webdunia
ಭಾನುವಾರ, 29 ಆಗಸ್ಟ್ 2021 (19:31 IST)
ಬೆಂಗಳೂರು: 
 
ಮೈಸೂರಿನ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ವಿದ್ಯಾರ್ಥಿ ಮೇಲೆ ಸಾಮೂಹಿಕ ಅತ್ಯಾಾಚಾರ. ಮತ್ತೊಂದೆಡೆ, ವಿಜಯಪುರದ ಸಿಂದಗಿಯಲ್ಲಿ 13 ವರ್ಷದ ಅಪ್ರಾಪ್ತ ಬಾಲಕಿ ಮೇಲಿನ ಅತ್ಯಾಚಾರ ಪ್ರಕರಣ. ಈ ಘಟನೆಗಳು ನಡೆದು ಇನ್ನು ವಾರವೂ ಉರುಳಿಲ್ಲ. ಈ ನಡುವೆ ರಾಜಧಾನಿಯಲ್ಲಿ 16 ವರ್ಷದ ಅಪ್ರಾಪ್ತ ಬಾಲಕಿಗೆ ಯುವಕನೋರ್ವ ಹಾಡಹಗಲೇ ಕಿರುಕುಳ ನೀಡಿರುವ ಘಟನೆ ಬೆಳಕಿಗೆ ಬಂದಿದ್ದು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ.
 
ಅಪ್ರಾಪ್ತ ಬಾಲಕಿಗೆ ಯುವಕನೋರ್ವ ರಸ್ತೆಯಲ್ಲೇ ಕಿರುಕುಳ ನೀಡಿರುವ ಘಟನೆ ಪೀಣ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಶನಿವಾರ ಸಂಜೆ 4 ಗಂಟೆ ಸುಮಾರಿನಲ್ಲಿ ಈ ಘಟನೆ ನಡೆದಿದ್ದು, ಅಪ್ರಾಪ್ತ ಬಾಲಕಿ ಜೋರಾಗಿ ಕಿರುಚುತ್ತಿದ್ದಂತೆ ಯುವಕ ಪರಾರಿಯಾಗಿದ್ದಾನೆ. ಅಲ್ಲದೆ, ಸೋಮವಾರ ಒಬ್ಬಳೇ ಸಿಗು ಎಂದು ಹೇಳಿದ್ದಾನೆ ಎನ್ನಲಾಗಿದೆ. ಸದ್ಯ ಬಾಲಕಿಗೆ ಕಿರುಕುಳ ನೀಡಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ ಪೊಲೀಸರು ತಿಳಿಸಿದ್ದಾರೆ.
 
ಪ್ರಕರಣ ಸಂಬಂಧ ಪೊಲೀಸರು, ಈಗಾಗಲೇ ಸಂತ್ರಸ್ತ ಬಾಲಕಿಯನ್ನು ಭೇಟಿ ಮಾಡಿ ಘಟನೆ ಕುರಿತು ಮಾಹಿತಿ ಕಲೆ ಹಾಕಿದ್ದಾರೆ. ಈ ಬಗ್ಗೆ ದೂರು ನೀಡುವುದಾಗಿ ಸಂತ್ರಸ್ತ ಬಾಲಕಿ ಪೊಲೀಸರಿಗೆ ತಿಳಿಸಿದ್ದು, ಆರೋಪಿಯ ಪತ್ತೆಗಾಗಿ ತನಿಖೆ ಕೈಗೊಳ್ಳಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.
 
ಹಾಡಹಗಲೇ ಯುವಕ ಅಪ್ರಾಾಪ್ತ ಬಾಲಕಿಗೆ ಕಿರುಕುಳ ನೀಡಿರುವ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಬೇಕು. ಕೂಡಲೆ, ಎಫ್‌ಐಆರ್ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸುವಂತೆ ಉತ್ತರ ವಿಭಾಗ ಡಿಸಿಪಿ ಧರ್ಮೇಂದ್ರ ಕುಮಾರ್ ಮೀನಾ ಪೊಲೀಸರಿಗೆ ತಾಕೀತು ಮಾಡಿದ್ದಾರೆ ಎಂದು ತಿಳಿದುಬಂದಿದೆ.
 
ಚುಂಬಿಸಿ ಪರಾರಿ:
ಅಪ್ರಾಸ್ತ ಬಾಲಕಿಗೆ ಯುವಕ ಕಿರುಕುಳ ನೀಡಿರುವ ವಿಡಿಯೋ ಪೊಲೀಸರಿಗೆ ಲಭ್ಯವಾಗಿದೆ. ಯುವಕ ಕಿರುಕುಳ ನೀಡಿದ್ದಾನೆ ಎನ್ನಲಾದ ವಿಡಿಯೋದಲ್ಲಿ ಯುವತಿ ರಸ್ತೆೆಯಲ್ಲಿ ಹೋಗುತ್ತಿರುವಾಗ ಹಿಂಭಾಲಿಸುತ್ತಿದ್ದ ಯುವಕ, ದಿಢೀರನೆ ಅಪ್ರಾಪ್ತೆ ಮೇಲೆ ದಾಳಿ ಮಾಡಿದ್ದಾಾನೆ. ಅಪ್ರಾಪ್ತೆ ಜೋರಾಗಿ ಕಿರುಚಾಡುತ್ತಿದ್ದಂತೆ ಯುವಕ, ಆಕೆಗೆ ಚುಂಬಿಸಿ (ಮುತ್ತು ಕೊಟ್ಟು) ಪರಾರಿಯಾಗಿದ್ದಾನೆ. ಘಟನೆ ಸಂಬಂಧ ಮಾಹಿತಿ ಕಲೆಹಾಕಲಾಗುತ್ತಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಚಂಡಮಾರುತ ಎಫೆಕ್ಟ್‌, ದೇಶದ ಈ ಭಾಗದಲ್ಲಿ ಆ.7ರ ವರೆಗೆ ಭಾರೀ ಮಳೆ

ಶ್ರೀನಗರ ವಿಮಾನ ನಿಲ್ದಾಣದಲ್ಲಿ ಸ್ಪೈಸ್ ಜೆಟ್‌ ಸಿಬ್ಬಂದಿಗೆ ಹಿಗ್ಗಾಮುಗ್ಗಾ ಥಳಿಸಿದ ಸೇನಾಧಿಕಾರಿ, ಕಾರಣ ಇಲ್ಲಿದೆ

ಭಾರೀ ರಾಜಕೀಯ ಬೆಳವಣಿಗೆ ಬೆನ್ನಲ್ಲೇ ರಾಷ್ಟ್ರಪತಿಯನ್ನು ಭೇಟಿಯಾದ ಪ್ರಧಾನಿ ಮೋದಿ

ಉತ್ತರಪ್ರದೇಶ: ಪೃಥ್ವಿನಾಥ ದೇವಸ್ಥಾನಕ್ಕೆ ಹೊರಟು ಮಸಣ ಸೇರಿದ 11 ಮಂದಿ

ಮೀರತ್‌ ಭಯಾನಕ ಅಪರಾಧ: 7 ತಿಂಗಳ ಗರ್ಭಿಣಿಯನ್ನು ಚಾಕುವಿನಿಂದ ಇರಿದು ಕೊಂದ ಪತಿ

ಮುಂದಿನ ಸುದ್ದಿ
Show comments