Publish Date: Sun, 07 Oct 2018 (08:35 IST)
Updated Date: Sun, 07 Oct 2018 (08:38 IST)
ಮುಂಬೈ : ಬ್ಯಾಂಕ್ ನಿಂದ ಮರಳುತ್ತಿದ್ದ 17 ವರ್ಷದ ಶಾಲಾ ವಿದ್ಯಾರ್ಥಿನಿಯೊಬ್ಬಳ ಮೇಲೆ ಇಬ್ಬರು ಕಾಮುಕರು ಅತ್ಯಾಚಾರ ಎಸಗಿದ ಘಟನೆ ಬುಡಕಟ್ಟು ಪ್ರಾಬಲ್ಯವಿರುವ ಮೊಖದಾ ತಾಲೂಕಿನ ಗ್ರಾಮವೊಂದರಲ್ಲಿ ನಡೆದಿದೆ.
ವಿದ್ಯಾರ್ಥಿ ಬ್ಯಾಂಕ್ಗೆ ಭೇಟಿ ನೀಡಿ ಮನೆಗೆ ಹಿಂದಿರುಗುತ್ತಿದ್ದ ವೇಳೆ ಆಕೆಯನ್ನ ಮೋಟಾರ್ ಸೈಕಲ್ ಮೇಲೆ ಬಂದ ಇಬ್ಬರು ಎಳೆದಾಡಿದ್ದು, ತದನಂತರ ಅಪಹರಿಸಿ ದುಷ್ಕೃತ್ಯವೆಸಗಿದ್ದಾರೆ ಎಂದು ತಿಳಿದು ಬಂದಿದೆ.
ಘಟನೆಗೆ ಸಂಬಂಧಿಸಿದಂತೆ ಬಾಲಕಿ ಪೋಷಕರು ದೂರು ದಾಖಲು ಮಾಡಿದ್ದು, ಆರೋಪಿಗಳಿಗಾಗಿ ಶೋಧ ಕಾರ್ಯ ನಡೆಸಲಾಗುತ್ತಿದೆ ಎಂದು ಸಬ್ಇನ್ಸ್ಪೆಕ್ಟರ್ ರಾಕೇಶ್ ಪಗರೆ ತಿಳಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.