Select Your Language

Notifications

webdunia
webdunia
webdunia
webdunia

ಆಮಿಷವೊಡ್ಡಿ ಅಪ್ರಾಪ್ತ ಬಾಲಕಿ ಮೇಲೆ 63ರ ವೃದ್ಧನಿಂದ ಅತ್ಯಾಚಾರ!

ಆಮಿಷವೊಡ್ಡಿ ಅಪ್ರಾಪ್ತ ಬಾಲಕಿ ಮೇಲೆ 63ರ ವೃದ್ಧನಿಂದ ಅತ್ಯಾಚಾರ!
ಮಂಡ್ಯ , ಗುರುವಾರ, 13 ಅಕ್ಟೋಬರ್ 2022 (07:58 IST)
ಮಂಡ್ಯ : ಊಟ ತಿಂಡಿ ಆಮಿಷ ತೋರಿಸಿ ಅಪ್ರಾಪ್ತ ಬಾಲಕಿಯ ಮೇಲೆ 63 ವರ್ಷದ ವೃದ್ಧ ಬಲವಂತವಾಗಿ ಅತ್ಯಾಚಾರವೆಸಗಿರುವ ಘಟನೆ ಮಂಡ್ಯ ಜಿಲ್ಲೆಯ ಹಲಗೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಜರುಗಿದೆ.

ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ವ್ಯಾಪ್ತಿಯ ಗ್ರಾಮವೊಂದರಲ್ಲಿ 63 ವರ್ಷದ ವಯೋವೃದ್ಧ ಗ್ರಾಮದ ಹದಿನೈದು ವರ್ಷದ ಅಪ್ರಾಪ್ತ ಬಾಲಕಿ ಮೇಲೆ ಹಲಗೂರು ಪಟ್ಟಣಕ್ಕೆ ಕರೆದುಕೊಂಡು ಬಂದಿದ್ದನು.

ಈ ವೇಳೆ ಬಾಲಕಿಗೆ ಊಟ ತಿಂಡಿ ಕೊಡಿಸಿ ನಂತರ ಬಲವಂತವಾಗಿ ಆಕೆಯ ಮೇಲೆ ಅತ್ಯಾಚಾರವೆಸಗಿದ್ದಾನೆ. ಬಳಿಕ ಬಾಲಕಿ ಆರೋಪಿ ವಿರುದ್ಧ ಹಲಗೂರು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾಳೆ. 

 

Share this Story:

Follow Webdunia kannada

ಮುಂದಿನ ಸುದ್ದಿ

ದೇಶದ ಎಲ್ಲ ರೈಲುಗಳಿಗೂ ಎಲೆಕ್ಟ್ರಿಕ್‌ ಇಂಜಿನ್ : ರೈಲ್ವೆ ಇಲಾಖೆ