Webdunia - Bharat's app for daily news and videos

Install App

ಲೈಂಗಿಕ ಕ್ರಿಯೆಯಲ್ಲಿ ತೊಡಗಿದ್ದಾಗ 67ರ ವೃದ್ಧ ಹೃದಯಾಘಾತ

Webdunia
ಶುಕ್ರವಾರ, 25 ನವೆಂಬರ್ 2022 (09:33 IST)
ಬೆಂಗಳೂರು : ಪುಟ್ಟೇನಹಳ್ಳಿ ವೃದ್ಧರ ಶವ ಬ್ಯಾಗ್ನಲ್ಲಿ ಪತ್ತೆ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್ ಸಿಕ್ಕಿದೆ. ಮನೆ ಕೆಲಸದಾಕೆ ಜೊತೆ ಲೈಂಗಿಕ ಕ್ರಿಯೆಯಲ್ಲಿ ತೊಡಗಿದ್ದಾಗ ಹೃದಯಾಘಾತವಾಗಿ ಸಾವನ್ನಪ್ಪಿರುವ ಸತ್ಯ ತನಿಖೆ ವೇಳೆ ಬಯಲಾಗಿದೆ.

ನವೆಂಬರ್ 16 ರಂದು ಮೊಮ್ಮಗನನ್ನು ಬ್ಯಾಡ್ಮಿಂಟನ್ ಕ್ಲಾಸ್ಗೆ ಕರೆದುಕೊಂಡು ಹೋಗಿದ್ದ ವೃದ್ಧ ಬಾಲಸುಬ್ರಮಣಿಯನ್ (67) ಸಂಜೆ 4:55ರ ವೇಳೆಗೆ ಸೊಸೆಗೆ ಕರೆ ಮಾಡಿ ಹೊರಗಡೆ ಕೆಲಸ ಇದೆ ಎಂದು ತಿಳಿಸಿದ್ರು.

ಬಳಿಕ ಕರೆ ಮಾಡಿದ್ರೆ ಫೋನ್ ಸ್ವಿಚ್ ಆಫ್ ಆಗಿತ್ತು. ಆ ನಂತರ ಮಗ ಠಾಣೆಗೆ ನಾಪತ್ತೆ ದೂರು ದಾಖಲಿಸಿದ್ರು. ಈ ಬಗ್ಗೆ ತನಿಖೆ ಆರಂಭಿಸಿದ ಪೊಲೀಸರಿಗೆ ಶಾಕ್ ಕಾದಿತ್ತು.

ನ.18 ರಂದು ಪುಟ್ಟೇನಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ಚೀಲ ಮತ್ತು ಬೆಡ್ಶೀಟ್ನಲ್ಲಿ ಸುತ್ತಿದ್ದ ಮೃತದೇಹವೊಂದು ಜೆಪಿ ನಗರದ 6ನೇ ಹಂತದ ಸಮೀಪ ಪತ್ತೆಯಾಗಿತ್ತು. ಇದು ಬಾಲಸುಬ್ರಮಣಿಯನ್ ಎಂದು ಗುರುತಿಸಲಾಗಿತ್ತು. ಬಳಿಕ ಬಾಲಸುಬ್ರಮಣಿಯನ್ ಸಾವಿನ ಬಗ್ಗೆ ಅನುಮಾನ ಮೂಡಿತ್ತು. 

ದೇಹದ ಮೇಲೆ ಯಾವುದೇ ಗಾಯಗಳು ಕಂಡು ಬಂದಿರಲಿಲ್ಲ. ಸಿಡಿಆರ್ ಪರಿಶೀಲಿಸಿದಾಗ ಶಾಕಿಂಗ್ ವಿಚಾರ ಬೆಳಕಿಗೆ ಬಂದಿತ್ತು. ಬಾಲಸುಬ್ರಮಣಿಯನ್ ಕಾಲ್ ಹಿಸ್ಟರಿ ಜಾಲಾಡಿದಾಗ ನಿರಂತರವಾಗಿ ಮಹಿಳೆಯೊಬ್ಬರ ಜೊತೆಗೆ ಸಂಪರ್ಕ ಇರುವುದು ಬಯಲಾಗಿತ್ತು.

ಸಾರಕ್ಕಿ ಸಿಗ್ನಲ್ ಬಳಿ ಲಾಸ್ಟ್ ಲೊಕೇಶನ್ ದಾಖಲಾಗಿತ್ತು. ಹೀಗಾಗಿ ಆ ಮಹಿಳೆ ಯಾರು ಅನ್ನೋದರ ಕುರಿತು ಖಾಕಿ ಬೆನ್ನು ಬಿದ್ದಿತ್ತು. ತನಿಖೆ ವೇಳೆ ಬಾಲಸುಬ್ರಮಣಿಯನ್ ಮನೆಗೆ ಬರುತ್ತಿದ್ದ ಮನೆ ಕೆಲಸದಾಕೆ ಮೇಲೆ ಅನುಮಾನ ಮೂಡಿತ್ತು. ನಂತರ ಮನೆ ಕೆಲಸದಾಕೆಯನ್ನು ವಿಚಾರಿಸಿದಾಗ ಸಾವಿನ ಸತ್ಯ ಹೊರಬಿದ್ದಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಪ್ರಾಪ್ತ ಮಗಳ ಮೇಲೆ ಮೂರು ವರ್ಷ ಲೈಂಗಿಕ ದೌರ್ಜನ್ಯ: ಪಾಪಿ ಅಪ್ಪನಿಗೆ ಜೀವಾವಧಿ ಶಿಕ್ಷೆ

ಯೋಗಿ ಸಿಎಂ ಆದ್ಮೇಲೆ ಯುಪಿಯಲ್ಲಿ 15 ಸಾವಿರ ಎನ್‌ಕೌಂಟರ್‌, 30 ಸಾವಿರ ಕ್ರಿಮಿನಲ್‌ಗಳ ಅರೆಸ್ಟ್‌

ಜಮೀನು ಒತ್ತುವರಿ ಪ್ರಕರಣ: ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ಕುಮಾರಸ್ವಾಮಿಗೆ ಬಿಗ್ ರಿಲೀಫ್‌

ಭಿಕ್ಷಾಟನೆಯಲ್ಲಿ ತೊಡಗಿರುವ ಮಕ್ಕಳ ಡಿಎನ್‌ಎ ಟೆಸ್ಟ್‌ಗೆ ಮುಂದಾದ ಪಂಜಾಬ್ ಸರ್ಕಾರ

ಶುಭಾಂಶು ಶುಕ್ಲಾ ಆರೋಗ್ಯದ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಇಸ್ರೋ

ಮುಂದಿನ ಸುದ್ದಿ