Select Your Language

Notifications

webdunia
webdunia
webdunia
Friday, 11 April 2025
webdunia

ರೈತರಿಗೆ ಕಬ್ಬಿನ ಬಾಕಿ ಪಾವತಿಸದ ಹಿನ್ನಲೆ; ಸಕ್ಕರೆ ಕಾರ್ಖಾನೆಗಳಿಗೆ ಮುಟ್ಟುಗೋಲು ಹಾಕಲು ಆದೇಶ

ಬೆಳಗಾವಿ
ಬೆಳಗಾವಿ , ಮಂಗಳವಾರ, 18 ಜೂನ್ 2019 (11:35 IST)
ಬೆಳಗಾವಿ : ರೈತರಿಗೆ ಕಬ್ಬಿನ ಬಾಕಿ ಪಾವತಿಸಿ ಎಂದ ಸಿಎಂ ಆದೇಶಕ್ಕೆ ಕ್ಯಾರೆ ಎನ್ನದ ಸಕ್ಕರೆ ಕಾರ್ಖಾನೆಗಳ ವಿರುದ್ಧ ಕ್ರಮಕ್ಕೆ ಸೂಚನೆ ನೀಡಿದ್ದ ಹಿನ್ನಲೆಯಲ್ಲಿ ಮುಟ್ಟುಗೋಲಿಗೆ ಜಿಲ್ಲಾಧಿಕಾರಿ ಆದೇಶ ಹೊರಡಿಸಲಾಗಿದೆ ಎನ್ನಲಾಗಿದೆ.




ಕಬ್ಬು ಬೆಳೆಗಾರರಿಗೆ ಬಾಕಿ ಪಾವತಿಸದ ಕಾರಣ ಬೆಂಗಳೂರಿನಲ್ಲಿ ರೈತರು ಪ್ರತಿಭಟನೆ ನಡೆಸಿ ಸಿಎಂ ಕುಮಾರಸ್ವಾಮಿ ಅವರಿಗೆ ಮನವಿ ಮಾಡಿದ್ದರು. ಈ ಕುರಿತು ಸಭೆ ನಡೆಸಿದ್ದ ಸಿಎಂ 15 ದಿನದೊಳಗೆ ಕಬ್ಬಿನ ಬಾಕಿ ಪಾವತಿಸಬೇಕು, ಇಲ್ಲದಿದ್ದರೆ ಕಾರ್ಖಾನೆ ಮುಟ್ಟುಗೋಲು ಹಾಕುವುದಾಗಿ ಎಚ್ಚರಿಕೆ ನೀಡಿದ್ದರು.


ಆದರೆ ಇನ್ನು ರೈತರಿಗೆ ಕಬ್ಬಿನ ಬಾಕಿ ಪಾವತಿಸಿದ ಕಾರಣ ಖಾನಾಪುರದ ಭಾಗ್ಯಲಕ್ಷ್ಮಿ ಸಕ್ಕರೆ ಕಾರ್ಖಾನೆ, ಮುನವಳ್ಳಿಯ ರೇಣುಕಾ ಶುಗರ್ಸ್, ಅಥಣಿ ಶುಗರ್ಸ್, ಕೊಳವಿ ಗೋಕಾಕ್ ಶುಗರ್ಸ್, ಕೃಷ್ಣ ಶುಗರ್ಸ್, ಬೈಲಹೊಂಗಲದ ಸೋಮೇಶ್ವರ ಸಹಕಾರಿ ಸಕ್ಕರೆ ಕಾರ್ಖಾನೆ, ಬೆಲ್ಲದ ಬಾಗೇವಾಡಿ ವಿಶ್ವರಾಜ ಶುಗರ್ಸ್, ಎಂಕೆ ಹುಬ್ಬಳ್ಳಿಯ ಮಲಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆ, ಉಗಾರ ಶುಗರ್ಸ್ ಗಳಿಗೆ ಮುಟ್ಟುಗೋಲು ಹಾಕುವಂತೆ  ಜಿಲ್ಲಾಧಿಕಾರಿ ತಹಶೀಲ್ದಾರ್ ಗಳಿಗೆ ಸೂಚನೆ ನೀಡಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ಬಿಜೆಪಿ ರಾಷ್ಟ್ರೀಯ ಕಾರ್ಯಾಧ್ಯಕ್ಷರಾಗಿ ಜೆ.ಪಿ. ನಡ್ಡಾ ನೇಮಕ