Publish Date: Fri, 24 Jul 2026 (17:48 IST)
Updated Date: Fri, 24 Jul 2026 (17:52 IST)
ಬೆಂಗಳೂರು: ನಮ್ಮ ಮೆಟ್ರೋ ಪ್ರಯಾಣಿಕರಿಗೆ ಇದೀಗ ಬಿಗ್ ಶಾಕ್ ಒಂದು ಕಾದಿದೆ. ಹೌದು ಬೆಂಗಳೂರು ಮೆಟ್ರೋ ರೈಲ್ ಕಾರ್ಪೋರೇಷನ್ ಲಿಮಿಟೆಡ್(ಬಿಎಂಆರ್ ಸಿಎಲ್) ನಮ್ಮ ಮೆಟ್ರೋ ಪ್ರಯಾಣಿಕರ ದರದಲ್ಲಿ ಮತ್ತೇ ಏರಿಕೆ ಮಾಡಲು ಚಿಂತಿಸಿದೆ ಎಂದು ತಿಳಿದುಬಂದಿದೆ.
ಬಿಎಂಆರ್‌ಸಿಎಲ್ ಹೊಸ ಮಾದರಿಯಲ್ಲಿ ಮೆಟ್ರೋ ಪ್ರಯಾಣ ದರ ಏರಿಕೆ ಮಾಡುವ ಪ್ರಸ್ತಾಪವನ್ನು ಕೇಂದ್ರ ಸರ್ಕಾರಕ್ಕೆ ಸಲ್ಲಿಕೆ ಮಾಡಿದ್ದು, ಮೂರು ವರ್ಷಗಳಿಗೊಮ್ಮೆ ಶೇ.12ರಷ್ಟು ದರ ಏರಿಕೆ ಮಾಡುವ ಬಗ್ಗೆ ಪ್ರಸ್ತಾಪಿಸಿದೆ.
ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯಕ್ಕೆ ಸಲ್ಲಿಸಲಾದ ಪರಿಷ್ಕೃತ ವಿಸ್ತೃತ ಯೋಜನಾ ವರದಿಯಲ್ಲಿ ದರ ಏರಿಕೆಯ ಹೊಸ ಲೆಕ್ಕಾಚಾರವನ್ನು ಉಲ್ಲೇಖಿಸಲಾಗಿದೆ
ಬಿಎಂಆರ್‌ಸಿಎಲ್ ಅಂದಾಜಿನಂತೆ 2033ರಲ್ಲಿ ಈ ಮಾರ್ಗದಲ್ಲಿ ಪ್ರತಿದಿನ 6.44 ಲಕ್ಷ ಪ್ರಯಾಣಿಕರು ಸಂಚರಿಸಲಿದ್ದು, ವರ್ಷದಲ್ಲಿ ₹2,164 ಕೋಟಿ ಆದಾಯ ಹರಿದುಬರಲಿದೆ.
ಪ್ರತಿ 3 ವರ್ಷಕ್ಕೊಮ್ಮೆ ಶೇ. 12ರಷ್ಟು ದರ ಪರಿಷ್ಕರಣೆಯಾದರೆ 2033ರ ವೇಳೆಗೆ ಗರಿಷ್ಠ ಪ್ರಯಾಣ ದರ 126ಕ್ಕೆ ತಲುಪುವ ಸಾಧ್ಯತೆಯಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.
About Writer
ಸಂಪ್ರಿಯ
ಕನ್ನಡ ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷದಲ್ಲಿ ಬೇರೆ ಬೇರೆ ಸಂಸ್ಥೆಗಳಲ್ಲಿ ರಿಪೋರ್ಟರ್ ಆಗಿ, ಸಬ್ ಎಡಿಟರ್ ಆಗಿ, ಇದೀಗ ಕಂಟೆಂಟ್ ರೈಟರ್ ಆಗಿ ವೆಬ್ದುನಿಯಾದಲ್ಲಿ ಕೆಲಸ. ಆಳ್ವಾಸ್ ಕಾಲೇಜಿನಲ್ಲಿ ಸಮೂಹ ಸಂವಹನ ಮತ್ತು ಪತ್ರಿಕೋಧ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು 2016ನೇ ಸಾಲಿನಲ್ಲಿ ಪಡೆದಿರುತ್ತೇನೆ. ಮನರಂಜನೆ, ಲೈಫ್ಸ್ಟೈಲ್, ರಾಜಕೀಯ ಸುದ್ದಿಗಳ ಬಗ್ಗೆ ವಿಶೇಷ ಆಸಕ್ತಿ. ....
ಮತ್ತಷ್ಟು ಓದಿ