Select Your Language

Notifications

webdunia
webdunia
webdunia
webdunia

ಪ್ರಚೋದನಕಾರಿ ಭಾಷಣ ಮಾಡಿದ ಕನ್ನೇರಿ ಕಾಡಸಿದ್ಧೇಶ್ವರ ಶ್ರೀಗಳಿಗೆ ಬಿಗ್‌ಶಾಕ್

Kanneri Adhresya Kadasiddheshwara Swamiji

Sampriya

ವಿಜಯಪುರ , ಗುರುವಾರ, 16 ಅಕ್ಟೋಬರ್ 2025 (17:01 IST)
Photo Credit X
ವಿಜಯಪುರ: ಪ್ರಚೋದನಕಾರಿ ಭಾಷಣ ಮಾಡಿದ ಸಂಬಂಧ ಕನ್ನೇರಿ ಅದೃಶ್ಯ ಕಾಡಸಿದ್ದೇಶ್ವರ ಶ್ರೀಗಳಿಗೆ 2 ತಿಂಗಳುಗಳ ಕಾಲ ವಿಜಯಪುರ ಜಿಲ್ಲೆಗೆ ಪ್ರವೇಶಕ್ಕೆ ನಿರ್ಬಂಧಿಸಿ ಜಿಲ್ಲಾಧಿಕಾರಿ ಆನಂದ.ಕೆ ಆದೇಶಿಸಿದ್ದಾರೆ.

ಈಚೆಗೆ ಮಹಾರಾಷ್ಟ್ರದ ಜತ್ತ ತಾಲೂಕಿನ ಬೀಳೂರು ಗ್ರಾಮದಲ್ಲಿ ಸಿಎಂ ಸಿದ್ಧರಾಮಯ್ಯ ವಿರುದ್ಧ ಕನ್ನೇರಿ ಶ್ರೀಗಳು ಗುಡುಗಿದ್ದರು. 

ಭಾಷಣ ಮಾಡುವ ಸಂದರ್ಭದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಕೃಪಾಪೋಷಿತ ಲಿಂಗಾಯತ ಮಠಾಧೀಶರ ಒಕ್ಕೂಟ ಎಂದು ಭಾಷಣ ಮಾಡಿದ್ದರು. ಅಲ್ಲದೇ ಲಿಂಗಾಯತ ಮಠಾಧೀಶರ ಕುರಿತು ಆಕ್ಷೇಪಾರ್ಹ ಮಾತುಗಳನ್ನಾಡಿದ್ದರು. ಈ ಹಿನ್ನೆಲೆ ಜಿಲ್ಲಾಧಿಕಾರಿ ಕೆ.ಆನಂದ್ ಅವರು ಈ ಆದೇಶವನ್ನು ಹೊರಡಿಸಿದ್ದಾರೆ. ಇದರ ಅನ್ವಯ ಶ್ರೀಗಳಿಗೆ ಎರಡು ತಿಂಗಳುಗಳ ಕಾಲ ಜಿಲ್ಲಾ ಪ್ರವೇಶಕ್ಕೆ ನಿರ್ಬಂಧ ಹೇರಿದ್ದಾರೆ.

ಇಂದಿನಿಂದ (ಅ.16) ಡಿಸೆಂಬರ್ 15ರವರೆಗೂ ಜಿಲ್ಲಾ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ. ಇನ್ನೂ ಇಂದು ಹಾಗೂ ನಾಳೆ (ಅ.17) ಬಸವನ ಬಾಗೇವಾಡಿಯಲ್ಲಿ ಆಯೋಜಿಸಲಾಗಿದ್ದ ಸಿದ್ದರಾಮೇಶ್ವರ ಸಪ್ತಾಹ ಕಾರ್ಯಕ್ರಮಕ್ಕೆ ಬರುವುದಾಗಿ ಕನ್ಹೇರಿ ಶ್ರೀಗಳು ಹೇಳಿದ್ದರು. 




Share this Story:

Follow Webdunia kannada

ಮುಂದಿನ ಸುದ್ದಿ

ನಿಷೇಧ ಆರ್ ಎಸ್ಎಸ್ ಗೆ ಮಾತ್ರನಾ, ಬೇರೆ ಧರ್ಮಕ್ಕೂ ಇದೆಯಾ: ಪ್ರಿಯಾಂಕ್ ಖರ್ಗೆ ಹೇಳಿದ್ದೇನು