ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ ಐಸಿಸಿ ಉಗ್ರ ಸೇರಿದಂತೆ ಇತರ ಕೈದಿಗಳಿಗೆ ರಾಜಾತಿಥ್ಯ ನೀಡಿದ ಪ್ರಕರಣ ಸಂಬಂಧ ಮೂವರು ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ.
ಮಾಧ್ಯಮದಲ್ಲಿ ಸತತ ವರದಿ ಪ್ರಸಾರವಾಗುತ್ತಿದ್ದ ಹಾಗೇ ಗೃಹ ಸಚಿವ ಪರಮೇಶ್ವರ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಮುಖ್ಯ ಅಧೀಕ್ಷಕ ಸುರೇಶ್, ಜೈಲ್ ಅಧೀಕ್ಷಕ ಮ್ಯಾಗೇರಿ, ಸಹಾಯಕ ಅಧೀಕ್ಷಕ ಅಶೋಕ್ ಭಜಂತ್ರಿ ಅವರನ್ನು ಅಮಾನತುಗೊಳಿಸುವ ನಿರ್ಧಾರ ತೆಗೆದುಕೊಳ್ಳಲಾಗಿದೆ.
ಎಡಿಜಿಪಿ ಅವರ ಮುಖ್ಯಸ್ಥರಾಗಿರುವ ಸಮಿತಿಯನ್ನು ರಚಿಸಿ, ಇನ್ಮುಂದೆ ಈ ರೀತಿ ಪ್ರಕರಣ ಮರುಕಳಿಸದ ಹಾಗೇ ಕಾನೂನು ಸುವ್ಯವಸ್ಥೆ ವಿಭಾಗವನ್ನು ರಚಿಸಲಾಗಿದೆ ಎಂದರು.