Select Your Language

Notifications

webdunia
webdunia
webdunia
webdunia

ಧರ್ಮಸ್ಥಳದಲ್ಲಿ ಯೂಟ್ಯೂಬರ್‌ಗಳ ಮೇಲಿನ ಹಲ್ಲೆ ಪ್ರಕರಣದಲ್ಲಿ ಬಿಗ್‌ಟ್ವಿಸ್ಟ್‌

ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ

Sampriya

ಬೆಳ್ತಂಗಡಿ , ಗುರುವಾರ, 7 ಆಗಸ್ಟ್ 2025 (19:29 IST)
ಬೆಳ್ತಂಗಡಿ: ಧರ್ಮಸ್ಥಳದ ಪಾಂಗಳದ ಬಳಿ ಯೂಟ್ಯೂಬರ್ ಮೇಲೆ ಹಲ್ಲೆ ನಡೆದ ಪ್ರಕರಣ ಸಂಬಂಧ ಧರ್ಮಸ್ಥಳ ಗ್ರಾಮ ಕನ್ಯಾಡಿ ನಿವಾಸಿ ಸೋಮನಾಥ ಸಪಲ್ಯ(48) ಅವರನ್ನು ಅರೆಸ್ಟ್ ಮಾಡಲಾಗಿದೆ.

ಪಾಂಗಳಕ್ಕೆ ಮಾಹಿತಿ ಕಲೆಹಾಕಲು ಬಂದಿದ್ದ ಯೂಟ್ಯೂಬರ್‌ಗಳ ಮೇಲೆ ಗುಂಪೊಂದು ಧರ್ಮಸ್ಥಳದ ಸುತ್ತಾ ಮುತ್ತಾ ಹಲವು ಶವಗಳನ್ನು ಹೂತಿಡಲಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿಸಿ, ಹಿಂದೂ ಭಾವನೆಗಳಿಗೆ ಸುಳ್ಳು ಸುದ್ದಿ ಹಬ್ಬಿಸುತ್ತಿದ್ದಾರೆಂದು ಅಲ್ಲಿಂದ್ದ ಮೂವರ ಮೇಲೆ ಏಕಾಏಕಿ ದಾಳಿ ಮಾಡಿದೆ. 

ಇದರಿಂದ ಯೂಟ್ಯೂಬರ್‌ಗಳು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. 

ಯೂಟ್ಯೂಬರ್ಸ್ ಮೇಲೆ ಹಲ್ಲೆ ನಡೆಸಿ ಕ್ಯಾಮರಾಗಳಿಗೆ ಹಾನಿ ಮಾಡಿ ಜೀವ ಬೆದರಿಕೆ ಒಡ್ಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಧರ್ಮಸ್ಥಳ ಗ್ರಾಮ ಕನ್ಯಾಡಿ ನಿವಾಸಿ ಸೋಮನಾಥ ಅವರನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. 

ಧರ್ಮಸ್ಥಳ ಪೊಲೀಸ್‌ ಠಾಣೆಯ ಸಬ್ ಇನ್ಸೆಕ್ಟರ್ ಸಮರ್ಥ್ ಆರ್ ಗಾಣಿಗೇರಾ ನೇತೃತ್ವದ ತಂಡ ಬಂಧಿಸಿ ಸಂಜೆ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಒಡಿಶಾ: 3 ಅಪ್ರಾಪ್ತರ ಮೇಲೆ ನಿರಂತರ ಅತ್ಯಾಚಾರ, ಕಾಮುಕನಿಗೆ ಕಠಿಣ ಶಿಕ್ಷೆ ವಿಧಿಸಿದ ಕೋರ್ಟ್‌