Publish Date: Sat, 03 Dec 2022 (12:13 IST)
Updated Date: Sat, 03 Dec 2022 (12:15 IST)
ಕಲಬುರಗಿ : ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ಆರೋಪ ಪ್ರತ್ಯಾರೋಪಗಳು ಹೆಚ್ಚಾಗ್ತಿದೆ.
ಇದೇ ವೇಳೆ ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ಮುಖಂಡ ಕೊಲೆ ಬೆದರಿಕೆಯ ಗಂಭೀರ ಆರೋಪ ಮಾಡಿದ್ದಾರೆ.
ಶಾಸಕ ಪ್ರಿಯಾಂಕ್ ಖರ್ಗೆ ವಿರುದ್ಧ ಹತ್ಯೆಗೆ ಸಂಚು ಆರೋಪ ಕೇಳಿ ಬಂದಿದ್ದು, ಚಿತ್ತಾಪುರ ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ಆಡಿಯೋ ರಿಲೀಸ್ ಮಾಡಿದ್ದಾರೆ. ಜಮೀನು ವಿವಾದದಲ್ಲಿ ನನ್ನನ್ನು ಮುಗಿಸಲು ಪ್ಲಾನ್ ಮಾಡಿದ್ದಾರೆ ಎಂದು ರಾಠೋಡ್ ಆರೋಪಿಸಿದ್ದಾರೆ.