ಮಾಸ್ಕೋದಿಂದ ದೆಹಲಿಗೆ ಬರುತ್ತಿದ್ದ ವಿಮಾನದಲ್ಲಿ ಬಾಂಬ್ ಇದೆ ಎಂದು ಬೆದರಿಕೆ ಕರೆ ಮಾಡಲಾಗಿದ್ದು, ಇದು ಸಾಕಷ್ಟು ಆತಂಕಕ್ಕೆ ಕಾರಣವಾಯಿತು. ನಿನ್ನೆ ರಾತ್ರಿ ವಿಮಾನಕ್ಕೆ ಬಾಂಬ್ ಇಟ್ಟಿರುವುದಾಗಿ ಅಪರಿಚಿತ ವ್ಯಕ್ತಿಯೊಬ್ಬರು ಕರೆ ಮಾಡಿದ್ದರು. ಬಳಿಕ ಮುನ್ನೆಚ್ಚರಿಕಾ ಕ್ರಮವಾಗಿ ಮಾಸ್ಕೋ-ದೆಹಲಿ ಮಾರ್ಗದ ವಿಮಾನದಲ್ಲಿದ್ದ ಪ್ರಯಾಣಿಕರನ್ನು ಸುರಕ್ಷಿತವಾಗಿ ವಿಮಾನದಿಂದ ಕೆಳಗಿಳಿಸಲಾಗಿದೆ. ವಿಮಾನದಲ್ಲಿ ಬಾಂಬ್ ಇದೆ ಎಂದು ನಿನ್ನೆ ಮಧ್ಯರಾತ್ರಿ ಫೋನ್ ಬಂದಿತ್ತು. ಈ ಬಾಂಬ್ ಕರೆ ಕುರಿತು ದೆಹಲಿ ಪೊಲೀಸರು ತನಿಖೆ ನಡೆಸಿದ್ದರು. ಇಂದು ಮುಂಜಾನೆ ವಿಮಾನವನ್ನು ಲ್ಯಾಂಡ್ ಮಾಡಿಸಿದ ದೆಹಲಿ ಪೊಲೀಸರು ವಿಮಾನವನ್ನು ಪರಿಶೀಲಿಸಿದ್ದಾರೆ. ವಿಮಾನದಲ್ಲಿದ್ದ ಎಲ್ಲಾ ಪ್ರಯಾಣಿಕರು ಮತ್ತು ಸಿಬ್ಬಂದಿಯನ್ನು ಕೆಳಗಿಳಿಸಿ, ತನಿಖೆಯನ್ನು ಪ್ರಾರಂಭಿಸಲಾಗಿದೆ. “ಕಳೆದ ರಾತ್ರಿ ಮಾಸ್ಕೋದಿಂದ ದೆಹಲಿಗೆ ಬರುತ್ತಿದ್ದ ವಿಮಾನದಲ್ಲಿ ಬಾಂಬ್ ಇರುವ ಬಗ್ಗೆ ನಿನ್ನೆ ರಾತ್ರಿ ಕರೆ ಬಂದಿತ್ತು. ಆ ವಿಮಾನವು ಇಂದು ಮುಂಜಾನೆ 3.20ರ ಸುಮಾರಿಗೆ ದೆಹಲಿಗೆ ಬಂದಿಳಿಯಿತು. ತಕ್ಷಣ ಎಲ್ಲಾ ಪ್ರಯಾಣಿಕರು ಮತ್ತು ಸಿಬ್ಬಂದಿಯನ್ನು ಇಳಿಸಲಾಯಿತು ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.