Select Your Language

Notifications

webdunia
webdunia
webdunia
webdunia

ಊಸರವಳ್ಳಿ ರಾಮಯ್ಯನ ಬೂಟಾಟಿಕೆ ಬಗ್ಗೆ ಪುಸ್ತಕವೇ ಬರೆಯಬಹುದು: ಆರ್‌.ಅಶೋಕ್

Chief Minister Siddaramaiah

Sampriya

ಬೆಂಗಳೂರು , ಶನಿವಾರ, 28 ಸೆಪ್ಟಂಬರ್ 2024 (16:34 IST)
ಬೆಂಗಳೂರು: 2011ರಲ್ಲಿ ಸಿದ್ದರಾಮಯ್ಯ ರಾಜ್ಯಪಾಲರ ಅಧಿಕಾರದ ಬಗ್ಗೆ ಮಾತನಾಡಿರುವ ವಿಡಿಯೋ ಹಂಚಿಕೊಂಡಿರುವ ವಿಪಕ್ಷ ನಾಯಕ ಆರ್‌ ಅಶೋಕ್ ಅವರು  ಡೋಂಗಿರಾಮಯ್ಯನ ಇಡೀ ಜೀವನವೇ ಒಂದು ದೊಡ್ಡ ಡೋಂಗಿ ಎಂದು ಕಿಡಿಕಾರಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಸಿಎಂ ಸಿದ್ದರಾಮಯ್ಯ ಅವರು ಮಾತನಾಡಿರುವ ವಿಡಿಯೋ ಹಂಚಿಕೊಂಡಿದ್ದಾರೆ.

ಡೋಂಗಿರಾಮಯ್ಯನ ಇಡೀ ಜೀವನವೇ ಒಂದು ದೊಡ್ಡ ಡೋಂಗಿ. ಬುರುಡೆ ರಾಮಯ್ಯನ ಬದುಕೆಲ್ಲ ಬರೀ ಬುರುಡೆಯೇ. ಕಾಲಕ್ಕೆ ತಕ್ಕಂತೆ ತಮ್ಮ ಮೂಗಿನ ನೇರಕ್ಕೆ ಬಣ್ಣ ಬದಲಾಯಿಸುವ ಊಸರವಳ್ಳಿ ರಾಮಯ್ಯನ ಬೂಟಾಟಿಕೆ ಬಗ್ಗೆ ದೊಡ್ಡ ಪುಸ್ತಕವೇ ಬರೆಯಬಹುದು ಎಂದು ವ್ಯಂಗ್ಯ ಮಾಡಿದ್ದಾರೆ.


2011ರಲ್ಲಿ ರಾಜ್ಯಪಾಲರ ಅಧಿಕಾರದ ಬಗ್ಗೆ ಸನ್ಮಾನ್ಯ ಸಿಎಂ ಸಿದ್ದರಾಮಯ್ಯ ಅವರು ನುಡಿದಿರುವ ನುಡಿಮುತ್ತುಗಳನ್ನು ಒಮ್ಮೆ ಕೇಳಿಸಿಕೊಳ್ಳಿ ಡಿಸಿಎಂ ಡಿಕೆ ಶಿವಕುಮಾರ್ ಅವರೇ..

ಎರಡೆರಡು ನ್ಯಾಯಾಲಯಗಳು ಛೀಮಾರಿ ಹಾಕಿ,  ಲೋಕಾಯುಕ್ತ ಪೊಲೀಸರು ಎಫ್ಐಆರ್ ಹಾಕಿದ್ದರೂ ಮುಖ್ಯಮಂತ್ರಿಗಳ ರಾಜೀನಾಮೆ ಪಡೆಯಲಾಗದಂತಹ ನಿಮ್ಮಂತಹ ದುರ್ಬಲ ಕೆಪಿಸಿಸಿ ಅಧ್ಯಕ್ಷರು ಬಹುಶಃ ಕಾಂಗ್ರೆಸ್ ಪಕ್ಷದ ಇತಿಹಾಸದಲ್ಲೇ ಇರಲಿಲ್ಲ. ಇಂತಹ ನಾಮಕಾವಸ್ತೆ ಅಧ್ಯಕ್ಷಗಿರಿ ಇಟ್ಟುಕೊಂಡು ಏನು ಮಾಡುತ್ತೀರಿ?

'ಮನೇಲಿ ಇಲಿ ಬೀದೀಲಿ ಹುಲಿ' ಎಂಬಂತೆ ನಿಮ್ಮ ಪೌರುಷ, ಅಬ್ಬರ ಮಾಧ್ಯಮಗಳ ಮುಂದೆ ಮಾತ್ರಾನಾ? ಅಥವಾ ಸಿದ್ದರಾಮಯ್ಯರನ್ನ ಇಳಿಸಿದರೆ ಅವರು ಕಾಂಗ್ರೆಸ್ ಪಕ್ಷವನ್ನೇ ಮುಳುಗಿಸಿ ಬಿಡುತ್ತಾರೆ ಎಂಬ ಭಯವೋ?

Share this Story:

Follow Webdunia kannada

ಮುಂದಿನ ಸುದ್ದಿ

ದೇವೇಗೌಡರಿಗೆ ಕಣ್ಣೀರು ಹಾಕಿಸಿದವರು ಯಾರೂ ಉದ್ಧಾರವಾಗಲ್ಲ: ಸಿಎಂ ವಿರುದ್ಧ ಗುಡುಗಿದ ಕುಮಾರಸ್ವಾಮಿ