ಊಸರವಳ್ಳಿ ರಾಮಯ್ಯನ ಬೂಟಾಟಿಕೆ ಬಗ್ಗೆ ಪುಸ್ತಕವೇ ಬರೆಯಬಹುದು: ಆರ್‌.ಅಶೋಕ್

Sampriya
ಶನಿವಾರ, 28 ಸೆಪ್ಟಂಬರ್ 2024 (16:34 IST)
ಬೆಂಗಳೂರು: 2011ರಲ್ಲಿ ಸಿದ್ದರಾಮಯ್ಯ ರಾಜ್ಯಪಾಲರ ಅಧಿಕಾರದ ಬಗ್ಗೆ ಮಾತನಾಡಿರುವ ವಿಡಿಯೋ ಹಂಚಿಕೊಂಡಿರುವ ವಿಪಕ್ಷ ನಾಯಕ ಆರ್‌ ಅಶೋಕ್ ಅವರು  ಡೋಂಗಿರಾಮಯ್ಯನ ಇಡೀ ಜೀವನವೇ ಒಂದು ದೊಡ್ಡ ಡೋಂಗಿ ಎಂದು ಕಿಡಿಕಾರಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಸಿಎಂ ಸಿದ್ದರಾಮಯ್ಯ ಅವರು ಮಾತನಾಡಿರುವ ವಿಡಿಯೋ ಹಂಚಿಕೊಂಡಿದ್ದಾರೆ.

ಡೋಂಗಿರಾಮಯ್ಯನ ಇಡೀ ಜೀವನವೇ ಒಂದು ದೊಡ್ಡ ಡೋಂಗಿ. ಬುರುಡೆ ರಾಮಯ್ಯನ ಬದುಕೆಲ್ಲ ಬರೀ ಬುರುಡೆಯೇ. ಕಾಲಕ್ಕೆ ತಕ್ಕಂತೆ ತಮ್ಮ ಮೂಗಿನ ನೇರಕ್ಕೆ ಬಣ್ಣ ಬದಲಾಯಿಸುವ ಊಸರವಳ್ಳಿ ರಾಮಯ್ಯನ ಬೂಟಾಟಿಕೆ ಬಗ್ಗೆ ದೊಡ್ಡ ಪುಸ್ತಕವೇ ಬರೆಯಬಹುದು ಎಂದು ವ್ಯಂಗ್ಯ ಮಾಡಿದ್ದಾರೆ.


2011ರಲ್ಲಿ ರಾಜ್ಯಪಾಲರ ಅಧಿಕಾರದ ಬಗ್ಗೆ ಸನ್ಮಾನ್ಯ ಸಿಎಂ ಸಿದ್ದರಾಮಯ್ಯ ಅವರು ನುಡಿದಿರುವ ನುಡಿಮುತ್ತುಗಳನ್ನು ಒಮ್ಮೆ ಕೇಳಿಸಿಕೊಳ್ಳಿ ಡಿಸಿಎಂ ಡಿಕೆ ಶಿವಕುಮಾರ್ ಅವರೇ..

ಎರಡೆರಡು ನ್ಯಾಯಾಲಯಗಳು ಛೀಮಾರಿ ಹಾಕಿ,  ಲೋಕಾಯುಕ್ತ ಪೊಲೀಸರು ಎಫ್ಐಆರ್ ಹಾಕಿದ್ದರೂ ಮುಖ್ಯಮಂತ್ರಿಗಳ ರಾಜೀನಾಮೆ ಪಡೆಯಲಾಗದಂತಹ ನಿಮ್ಮಂತಹ ದುರ್ಬಲ ಕೆಪಿಸಿಸಿ ಅಧ್ಯಕ್ಷರು ಬಹುಶಃ ಕಾಂಗ್ರೆಸ್ ಪಕ್ಷದ ಇತಿಹಾಸದಲ್ಲೇ ಇರಲಿಲ್ಲ. ಇಂತಹ ನಾಮಕಾವಸ್ತೆ ಅಧ್ಯಕ್ಷಗಿರಿ ಇಟ್ಟುಕೊಂಡು ಏನು ಮಾಡುತ್ತೀರಿ?

'ಮನೇಲಿ ಇಲಿ ಬೀದೀಲಿ ಹುಲಿ' ಎಂಬಂತೆ ನಿಮ್ಮ ಪೌರುಷ, ಅಬ್ಬರ ಮಾಧ್ಯಮಗಳ ಮುಂದೆ ಮಾತ್ರಾನಾ? ಅಥವಾ ಸಿದ್ದರಾಮಯ್ಯರನ್ನ ಇಳಿಸಿದರೆ ಅವರು ಕಾಂಗ್ರೆಸ್ ಪಕ್ಷವನ್ನೇ ಮುಳುಗಿಸಿ ಬಿಡುತ್ತಾರೆ ಎಂಬ ಭಯವೋ?<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಲವು ಮಕ್ಕಳ ಕಣ್ಣಿಗೆ ಗಾಯ ಬೆನ್ನಲ್ಲೇ 59 ಕಾರ್ಬೈಡ್ ಗನ್ ವಶಕ್ಕೆ, ಇಬ್ಬರು ಅರೆಸ್ಟ್‌

ಕರ್ನೂಲ್ ಭೀಕರ ಬಸ್ ಬೆಂಕಿ ಅವಘಡ, ಡಿಸಿಎಂ ಡಿಕೆ ಶಿವಕುಮಾರ್ ನೀಡಿದ ಸಲಹೆ ಹೀಗಿದೆ

ಪೊಲೀಸ್ ಅಧಿಕಾರಿಯಿಂದ ಅತ್ಯಾಚಾರ: ಅಂಗೈಯಲ್ಲಿ ಡೆತ್‌ನೋಟ್ ಬರೆದಿಟ್ಟು ವೈದ್ಯೆ ಸೂಸೈಡ್

ನನ್ನನ್ನು ಕತ್ತಲಲ್ಲಿ ಯಾಕೆ ಹುಡುಕ್ತೀಯಾ, ನಾನು ಹಾಗಲ್ಲ: ಪ್ರದೀಪ್ ಈಶ್ವರ್

ರಾಷ್ಟ್ರ ರಾಜಧಾನಿಯಲ್ಲಿ ಗಾಳಿ ಗುಣಮಟ್ಟ ಕಳಪೆ: ದೆಹಲಿಯಲ್ಲಿ ಈ ವ್ಯಾಪಾರದಲ್ಲಿ ಭಾರೀ ಏರಿಕೆ

ಮುಂದಿನ ಸುದ್ದಿ
Show comments