Webdunia - Bharat's app for daily news and videos

Install App

ಮಧ್ಯರಾತ್ರಿ ವಿದ್ಯಾರ್ಥಿನಿಯರ ವಸತಿ ನಿಲಯಕ್ಕೆ ಹೋದ ಬಾಲಕ ಕಟ್ಟಡದಿಂದ ಬಿದ್ದು ದುರ್ಮರಣ

Sampriya
ಗುರುವಾರ, 2 ಜನವರಿ 2025 (19:03 IST)
ಚಾಮರಾಜನಗರ: ಮೊರಾರ್ಜಿ ದೇಸಾಯಿ ಪದವಿ ಪೂರ್ವ ವಿದ್ಯಾರ್ಥಿನಿಯರ ಕಾಲೇಜು ವಸತಿ ನಿಲಯದ ಕಟ್ಟಡದಿಂದ ವಿದ್ಯಾರ್ಥಿಯೊಬ್ಬ ಬಿದ್ದು ಸಾವನ್ನಪ್ಪಿದ ಘಟನೆ ಚಾಮರಾಜನಗರ ಯಡವನಹಳ್ಳಿ ಗ್ರಾಮದಲ್ಲಿ ನಡೆದಿದೆ.

ಮೃತ ಬಾಲಕನನ್ನು ಮೊರಾರ್ಜಿ ದೇಸಾಯಿ ಪದವಿ ಪೂರ್ವ ವಸತಿ ಶಾಲೆಯಲ್ಲಿ ದ್ವಿತೀಯ ಪಿಯುಸಿ ಓದುತ್ತಿರುವ ಮಣಿತ್(17) ಎಂದು ಗುರುತಿಸಲಾಗಿದೆ.

ಎರಡನೇ ಮಹಡಿಯ ಕಿಟಕಿ ಬಳಿಯಿಂದ ಮಧ್ಯರಾತ್ರಿ 2 ಗಂಟೆ ವೇಳೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ಮಣಿತ್ ಇಂದು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ.

ಮಧ್ಯರಾತ್ರಿ 2 ಗಂಟೆ ಸುಮಾರಿಗೆ ಕಟ್ಟಡದಿಂದ ಬಿದ್ದಿದ್ದ ಮಣಿತ್‌ನನ್ನು ಬೆಳಗ್ಗೆ 8ಗಂಟೆಗೆ  ಸಹ ವಿದ್ಯಾರ್ಥಿಗಳು ಗಮನಿಸಿ ವಸತಿ ಶಾಲೆಯ ಮುಖ್ಯಸ್ಥರಿಗೆ ತಿಳಿಸಿದ್ದಾರೆ. ಕೂಡಲೇ ಗಾಯಗೊಂಡು ನರಳುತ್ತಿದ್ದ ಮಣಿತ್ ನನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಒಂದೇ ಆವರಣದಲ್ಲಿ ವಿದ್ಯಾರ್ಥಿನಿಯರ ಹಾಗೂ ವಿದ್ಯಾರ್ಥಿಗಳ ಪದವಿ ಪೂರ್ವ ಕಾಲೇಜಿನ ಪ್ರತ್ಯೇಕ ವಸತಿ ನಿಲಯಗಳಿವೆ. ಇದೀಗ ವಿದ್ಯಾರ್ಥಿನಿಯರ ವಸತಿ ನಿಲಯಕ್ಕೆ  ಮಣಿತ್ ಯಾಕೆ ಹೋಗಿದ್ದು ಎಂಬುದರ ಬಗ್ಗೆ ಚರ್ಚೆ ಹುಟ್ಟು ಹಾಕಿದೆ. ಮಧ್ಯರಾತ್ರಿಯಲ್ಲಿ ಮಣಿತ್‌ಗೆ ವಿದ್ಯಾರ್ಥಿನಿಯರ ಹಾಸ್ಟೆಲ್ ನಲ್ಲಿ ಕೆಲಸವೇನಿತ್ತು..? ಮಧ್ಯರಾತ್ರಿ ವಿದ್ಯಾರ್ಥಿನಿಯರ ಹಾಸ್ಟೆಲ್‌ಗೆ ಅಕ್ರಮವಾಗಿ ಪ್ರವೇಶಿಸಿದ್ದು ಹೇಗೆ?

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments