ಹಾಸನ ಜಿಲ್ಲೆಯಲ್ಲಿ ಮುಂಗಾರು ಮಳೆ ಕೈಕೊಟ್ಟಿದ್ದರಿಂದ ಲಕ್ಷಾಂತರ ಎಕರೆಯಲ್ಲಿ ಜೋಳ ಬೆಳೆದಿದ್ದ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಹಾಸನ ಜಿಲ್ಲೆಯ ಬಹುತೇಕ ತಾಲ್ಲೂಕುಗಳಲ್ಲಿ ಜೋಳದ ಬೆಳೆ ಬತ್ತಿ ಹೋಗಿದ್ದು, ರೈತರು ಸಾಲದ ಸುಳಿಗೆ ಸಿಲುಕಿಕೊಂಡಿದ್ದಾರೆ. ಜೂನ್-ಜುಲೈನಲ್ಲಿ ತಕ್ಕಮಟ್ಟಿಗೆ ಮಳೆಯಾದ ಹಿನ್ನೆಲೆ ರೈತರು ಬಿತ್ತನೆ ಮಾಡಿದ್ದರು. ಆದ್ರೆ ಆಗಸ್ಟ್ನಲ್ಲಿ ಮಳೆ ಕೊರತೆಯಾದ ಹಿನ್ನಲೆ ಬೆಳೆದು ನಿಂತಿದ್ದ ಜೋಳದ ಬೆಳೆಯೆಲ್ಲಾ ಬತ್ತಿ ಹೋಗಿವೆ. ಕೈಗೆ ಬಂದ ಬೆಳೆ ಬಾಯಿಗೆ ಬಾರದೆ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಕೂಡಲೇ ಸರ್ಕಾರ ಮಧ್ಯ ಪ್ರವೇಶಿಸಿ ಬೆಳೆ ಪರಿಹಾರ, ಸಾಲಮನ್ನಾ ಮಾಡಬೇಕೆಂದು ರೈತರು ಆಗ್ರಹಿಸಿದ್ದಾರೆ.