Publish Date: Mon, 14 Oct 2019 (11:28 IST)
Updated Date: Mon, 14 Oct 2019 (11:31 IST)
ತುಮಕೂರು : ಅನೈತಿಕ ಸಂಬಂಧಕ್ಕೆ ಒಪ್ಪದ ವಿವಾಹಿತೆಯನ್ನು ವ್ಯಕ್ತಿಯೊಬ್ಬ ಬೆಂಕಿ ಹಚ್ಚಿ ಕೊಂದ ಘಟನೆ ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ಮುರರಾಯನಹಳ್ಳಿಯಲ್ಲಿ ನಡೆದಿದೆ.
ಸುಜಾತ ಕೊಲೆಯಾದ ಮಹಿಳೆ. ಗಿರೀಶ್ ಬಾಬು ಕೊಲೆಗೈದ ವ್ಯಕ್ತಿ. ಸುಜಾತ ಪತಿ ಇಲ್ಲದ್ದನ್ನು ಗಮನಿಸಿ ಮನೆಗೆ ಹೋಗಿದ್ದ ಕಿರಾತಕ ಆಕೆಯ ಬಳಿ ಅನೈತಿಕ ಸಂಬಂಧ ಹೊಂದುವಂತೆ ಒತ್ತಾಯ ಮಾಡಿದ್ದಾನೆ. ಇದಕ್ಕೆ ಒಪ್ಪದಿದ್ದಾಗ ಆಕೆಯ ಮೇಲೆ ಸೀಮೆ ಎಣ್ಣೆ ಸುರಿದು ಬೆಂಕಿ ಹಚ್ಚಿದ್ದಾನೆ.
ತೀವ್ರವಾಗಿ ಗಾಯಗೊಂಡ ಸುಜಾತಳನ್ನು ಆಸ್ಪತ್ರೆಗೆ ದಾಖಲಿಸಿದ್ದರೂ ಚಿಕಿತ್ಸೆ ಫಲಕಾರಿಯಾಗದೆ ಸಾವನಪ್ಪಿದ್ದಾಳೆ. ಪಾವಗಡ ಪೊಲೀಸ್ ಠಾಣೆಯಲ್ಲಿ ಈ ಘಟನೆಯ ಕುರಿತು ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿ ಗಿರೀಶ್ ಬಾಬು ವನ್ನು ಬಂಧಿಸಿದ್ದಾರೆ ಎನ್ನಲಾಗಿದೆ.