Select Your Language

Notifications

webdunia
webdunia
webdunia
webdunia

ಉತ್ತರಾಖಂಡದಲ್ಲಿ ಕಂದಕಕ್ಕೆ ಉರುಳಿಬಿದ್ದ ಬಸ್: 36 ಮಂದಿ ದಾರುಣ ಸಾವು

ಉತ್ತರಾಖಂಡದಲ್ಲಿ ಕಂದಕಕ್ಕೆ ಉರುಳಿಬಿದ್ದ ಬಸ್: 36 ಮಂದಿ ದಾರುಣ ಸಾವು

Sampriya

ಡೆಹ್ರಾಡೂನ್ , ಸೋಮವಾರ, 4 ನವೆಂಬರ್ 2024 (14:33 IST)
Photo Courtesy X
ಡೆಹ್ರಾಡೂನ್: ಉತ್ತರಾಖಂಡದ ಅಲ್ಮೋರಾ ಜಿಲ್ಲೆಯಲ್ಲಿ ಬಸ್ಸೊಂದು ಕಂದಕಕ್ಕೆ ಉರುಳಿಬಿದ್ದ ಪರಿಣಾಮ 36 ಮಂದಿ ಸಾವನ್ನಪ್ಪಿರುವ ಘಟನೆ  ಸೋಮವಾರ ನಡೆದಿದೆ.

ಗರ್ವಾಲ್‌ನಿಂದ ಕುಮೌನ್'ಗೆ ತೆರಳುತ್ತಿದ್ದಾಗ ನಿಯಂತ್ರಣ ತಪ್ಪಿದ ಬಸ್‌ ಕಂದಕಕ್ಕೆ ಉರುಳಿ ಬಿದ್ದಿದೆ. ಬಸ್ ನಲ್ಲಿ 40ಕ್ಕೂ ಹೆಚ್ಚು ಮಂದಿ ಪ್ರಯಾಣಿಸುತ್ತಿದ್ದರು. ಈ ಅಪಘಾತದಲ್ಲಿ ಬಸ್ ಸಂಪೂರ್ಣ ಜಖಂಗೊಂಡಿದ್ದು, ದಾರಿಹೋಕರು ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಸುದ್ದಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ದೌಡಾಯಿರುವ ರಕ್ಷಣಾ ಪಡೆಗಳು ಸ್ಥಳದಲ್ಲಿ ಕಾರ್ಯಾಚರಣೆ ಆರಂಭಿಸಿದ್ದು, ಗಾಯಾಳುಘಳನ್ನು ಸ್ಥಳೀಯ ಆಸ್ಪತ್ರೆಗೆ ಸಾಗಿಸುತ್ತಿದ್ದಾರೆ. ಘಟನೆಯಲ್ಲಿ 36 ಮಂದಿ ಸಾವನ್ನಪ್ಪಿದ್ದು, ಮೃತಪಟ್ಟವರಲ್ಲಿ ಅಧಿಕರು ಮಕ್ಕಳಾಗಿದ್ದಾರೆ.

ಘಟನಗೆ ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದು, ರಕ್ಷಣಾ ಕಾರ್ಯಾಚರಣೆಯನ್ನು ಚುರುಕುಗೊಳಿಸುವಂತೆ ಜಿಲ್ಲಾಡಳಿತ ಮಂಡಳಿಗೆ ಸೂಚನೆ ನೀಡಿರುವುದಾಗಿ ತಿಳಿಸಿದ್ದಾರೆ. ಮೃತರ ಕುಟುಂಬಕ್ಕೆ ₹ 4 ಲಕ್ಷ ಹಾಗೂ ಗಾಯಾಳುಗಳಿಗೆ ₹ 1 ಲಕ್ಷ ಪರಿಹಾರ ನೀಡುವಂತೆ ಆರ್'ಟಿಒ ಅಧಿಕಾರಿಗಳಿಗೆ ಸೂಚಿಸಲಾಗಿದ್ದು, ನ್ಯಾಯಾಂಗ ತನಿಖೆಗೂ ಆದೇಶಿಸಲಾಗಿದೆ ಎಂದು ಹೇಳಿದ್ದಾರೆ.

ಈ ನಡುವೆ ಘಟನೆ ಸಂಬಂಧ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ತೀವ್ರ ಸಂತಾಪ ಸೂಚಿಸಿದ್ದು, ಗಾಯಾಳುಗಳು ಶೀಘ್ರಗತಿಯಲ್ಲಿ ಗುಣಮುಖರಾಗಲಿ ಎಂದು ಹೇಳಿದ್ದಾರೆ. ದುರ್ಘಟನೆಯಲ್ಲಿ ಮೃತಪಟ್ಟ ಪ್ರತಿಯೊಬ್ಬರ ಕುಟುಂಬಗಳಿಗೆ ಪ್ರಧಾನಮಂತ್ರಿ ಪರಿಹಾರ ನಿಧಿಯಿಂದ ₹ 2 ಲಕ್ಷ ಹಾಗೂ ಗಾಯಾಳುಗಳಿಗೆ ₹ 50,000  ಪರಿಹಾರ ನೀಡುವುದಾಗಿ ಘೋಷಣೆ ಮಾಡಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ನಿಖಿಲ್‌ ಪರ ಮತಯಾಚಿಸಿದ ಪತ್ನಿ ರೇವತಿ: ರಂಗೇರಿದ ಚನ್ನಪಟ್ಟಣ ಚುನಾವಣಾ ಕಣ