ಉತ್ತರಾಖಂಡದಲ್ಲಿ ಕಂದಕಕ್ಕೆ ಉರುಳಿಬಿದ್ದ ಬಸ್: 36 ಮಂದಿ ದಾರುಣ ಸಾವು

Sampriya
ಸೋಮವಾರ, 4 ನವೆಂಬರ್ 2024 (14:33 IST)
Photo Courtesy X
ಡೆಹ್ರಾಡೂನ್: ಉತ್ತರಾಖಂಡದ ಅಲ್ಮೋರಾ ಜಿಲ್ಲೆಯಲ್ಲಿ ಬಸ್ಸೊಂದು ಕಂದಕಕ್ಕೆ ಉರುಳಿಬಿದ್ದ ಪರಿಣಾಮ 36 ಮಂದಿ ಸಾವನ್ನಪ್ಪಿರುವ ಘಟನೆ  ಸೋಮವಾರ ನಡೆದಿದೆ.

ಗರ್ವಾಲ್‌ನಿಂದ ಕುಮೌನ್'ಗೆ ತೆರಳುತ್ತಿದ್ದಾಗ ನಿಯಂತ್ರಣ ತಪ್ಪಿದ ಬಸ್‌ ಕಂದಕಕ್ಕೆ ಉರುಳಿ ಬಿದ್ದಿದೆ. ಬಸ್ ನಲ್ಲಿ 40ಕ್ಕೂ ಹೆಚ್ಚು ಮಂದಿ ಪ್ರಯಾಣಿಸುತ್ತಿದ್ದರು. ಈ ಅಪಘಾತದಲ್ಲಿ ಬಸ್ ಸಂಪೂರ್ಣ ಜಖಂಗೊಂಡಿದ್ದು, ದಾರಿಹೋಕರು ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಸುದ್ದಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ದೌಡಾಯಿರುವ ರಕ್ಷಣಾ ಪಡೆಗಳು ಸ್ಥಳದಲ್ಲಿ ಕಾರ್ಯಾಚರಣೆ ಆರಂಭಿಸಿದ್ದು, ಗಾಯಾಳುಘಳನ್ನು ಸ್ಥಳೀಯ ಆಸ್ಪತ್ರೆಗೆ ಸಾಗಿಸುತ್ತಿದ್ದಾರೆ. ಘಟನೆಯಲ್ಲಿ 36 ಮಂದಿ ಸಾವನ್ನಪ್ಪಿದ್ದು, ಮೃತಪಟ್ಟವರಲ್ಲಿ ಅಧಿಕರು ಮಕ್ಕಳಾಗಿದ್ದಾರೆ.

ಘಟನಗೆ ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದು, ರಕ್ಷಣಾ ಕಾರ್ಯಾಚರಣೆಯನ್ನು ಚುರುಕುಗೊಳಿಸುವಂತೆ ಜಿಲ್ಲಾಡಳಿತ ಮಂಡಳಿಗೆ ಸೂಚನೆ ನೀಡಿರುವುದಾಗಿ ತಿಳಿಸಿದ್ದಾರೆ. ಮೃತರ ಕುಟುಂಬಕ್ಕೆ ₹ 4 ಲಕ್ಷ ಹಾಗೂ ಗಾಯಾಳುಗಳಿಗೆ ₹ 1 ಲಕ್ಷ ಪರಿಹಾರ ನೀಡುವಂತೆ ಆರ್'ಟಿಒ ಅಧಿಕಾರಿಗಳಿಗೆ ಸೂಚಿಸಲಾಗಿದ್ದು, ನ್ಯಾಯಾಂಗ ತನಿಖೆಗೂ ಆದೇಶಿಸಲಾಗಿದೆ ಎಂದು ಹೇಳಿದ್ದಾರೆ.

ಈ ನಡುವೆ ಘಟನೆ ಸಂಬಂಧ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ತೀವ್ರ ಸಂತಾಪ ಸೂಚಿಸಿದ್ದು, ಗಾಯಾಳುಗಳು ಶೀಘ್ರಗತಿಯಲ್ಲಿ ಗುಣಮುಖರಾಗಲಿ ಎಂದು ಹೇಳಿದ್ದಾರೆ. ದುರ್ಘಟನೆಯಲ್ಲಿ ಮೃತಪಟ್ಟ ಪ್ರತಿಯೊಬ್ಬರ ಕುಟುಂಬಗಳಿಗೆ ಪ್ರಧಾನಮಂತ್ರಿ ಪರಿಹಾರ ನಿಧಿಯಿಂದ ₹ 2 ಲಕ್ಷ ಹಾಗೂ ಗಾಯಾಳುಗಳಿಗೆ ₹ 50,000  ಪರಿಹಾರ ನೀಡುವುದಾಗಿ ಘೋಷಣೆ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಾಯಂದಿರ ಎದೆಹಾಲಿನಲ್ಲಿ ಯುರೇನಿಯಂ ಪತ್ತೆ, ಮಕ್ಕಳ ಮೇಲೆ ಪರಿಣಾಮವೇನು ಗೊತ್ತಾ

ದುಬೈ ಏರ್ ಶೋ ದುರಂತ, ತಾಯ್ನಾಡಿಗೆ ಪೈಲೆಟ್ ನಮನ್ಶ್‌ ಸಿಯಾಲ್ ಪಾರ್ಥಿವ ಶರೀರ

ಕರೂರು ಕಾಲ್ತುಳಿತ ಬೆನ್ನಲ್ಲೇ ಪಕ್ಷದ ಮುಖಂಡರ ಸಭೆ ಕರೆದ ನಟ ವಿಜಯ್

ಸುಪ್ರೀಂಕೋರ್ಟ್‌ನ 53ನೇ ಮುಖ್ಯ ನ್ಯಾಯಮೂರ್ತಿಯಾಗಿ ಸೂರ್ಯಕಾಂತ್‌ ನಾಳೆ ಪ್ರಮಾಣ ಸ್ವೀಕಾರ

ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಮತ್ತಷ್ಟು ಕಳಪೆ ಮಟ್ಟಕ್ಕೆ ಇಳಿದ ವಾಯು ಗುಣಮಟ್ಟ

ಮುಂದಿನ ಸುದ್ದಿ
Show comments