ಮಂಜೇಶ್ವರ-ಪುತ್ತೂರು-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕಾಣಿಯೂರು ಸಮೀಪದ ಬೈತಡ್ಕ ಎಂಬಲ್ಲಿ ಕಾರೊಂದು ಸೇತುವೆಯಿಂದ ಕೆಳಗೆ ಬಿದ್ದು ನೀರು ಪಾಲಾಗಿದ್ದು, ಕಾರು ಪತ್ತೆಯಾಗಿದೆ. ಬೈತಡ್ಕ ಮಸೀದಿಯ ಸಮೀಪವೇ ಇರುವ ಸೇತುವೆಗೆ ಕಾರೊಂದು ಢಿಕ್ಕಿ ಹೊಡೆದು ನಿಯಂತ್ರಣ ತಪ್ಪಿ ಸೇತುವೆಯಿಂದ ಕೆಳಕ್ಕೆ ಬಿದ್ದಿದೆ.ಈ ಕುರಿತು ಬೈತಡ್ಕ ಮಸೀದಿಯ ಸಿಸಿ ಕೆಮರಾದಲ್ಲಿ ದೃಶ್ಯ ಸೆರೆಯಾಗಿದೆ. ನೂರಾರೂ ಜನ ಕಾರು ಶೋಧ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು . ಕಾರು ಪತ್ತೆಯಾಗಿದ್ದು, ಕಾರ್ಯಚರಣೆ ನಡೆಸುತ್ತಿರುವಾಗ ಅದು ಮತ್ತೇ ಪ್ರವಾಹಕ್ಕೆ ಸಿಕ್ಕಿ ಕೊಚ್ಚಿಕೊಂಡು ಹೋಗಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಕುಮಾರಧಾರಾ ನದಿ ಸೇರುವ ಗೌರಿ ಹೊಳೆ ಕಟ್ಟಿರುವ ಸೇತುವೆ ಅಪಘಾತದ ವೇಗಕ್ಕೆ ತಡೆಬೇಲಿ ಜಖಂ ಆಗಿದೆ. ಮೂರು ಕಂಬಗಳು ಮುರಿದು ಕಬ್ಬಿಣ ನೇತಾಡುತ್ತಿದೆ. ಕಾರು ಮತ್ತು ಕಾರಿನಲ್ಲಿದ್ದವರು ನಾಪತ್ತೆಯಾಗಿದ್ದು, ನೀರಿನಲ್ಲಿ ಕೊಚ್ಚಿಕೊಂಡು ಹೋಗಿರೋ ಶಂಕೆ ವ್ಯಕ್ತವಾಗುತ್ತಿದೆ. ಕಾರು ಕಡಬ ತಾಲೂಕಿನ ಗುತ್ತಿಗಾರು ಮೂಲದ ಮಾರುತಿ-800 ಎಂಬ ಬಗ್ಗೆ ಮಾಹಿತಿ ಲಭಿಸಿದ್ದು, ಸದ್ಯ ಬೋಟ್ ಮೂಲಕ ಶೋಧ ನಡೆಸುತ್ತಿರುವ ಅಗ್ನಿಶಾಮಕ ದಳ ಹಾಗೂ ಸ್ಥಳೀಯರು ಕಾರು ಪತ್ತೆ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಪುತ್ತೂರು ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.