Webdunia - Bharat's app for daily news and videos

Install App

ಕಾಣಿಯೂರಿನಲ್ಲಿ ಹೊಳೆಗೆ ಬಿದ್ದ ಕಾರು

Webdunia
ಭಾನುವಾರ, 10 ಜುಲೈ 2022 (20:22 IST)
ಮಂಜೇಶ್ವರ-ಪುತ್ತೂರು-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕಾಣಿಯೂರು ಸಮೀಪದ ಬೈತಡ್ಕ ಎಂಬಲ್ಲಿ ಕಾರೊಂದು ಸೇತುವೆಯಿಂದ ಕೆಳಗೆ ಬಿದ್ದು ನೀರು ಪಾಲಾಗಿದ್ದು, ಕಾರು ಪತ್ತೆಯಾಗಿದೆ. ಬೈತಡ್ಕ ಮಸೀದಿಯ ಸಮೀಪವೇ ಇರುವ ಸೇತುವೆಗೆ ಕಾರೊಂದು ಢಿಕ್ಕಿ ಹೊಡೆದು ನಿಯಂತ್ರಣ ತಪ್ಪಿ ಸೇತುವೆಯಿಂದ ಕೆಳಕ್ಕೆ ಬಿದ್ದಿದೆ.ಈ ಕುರಿತು ಬೈತಡ್ಕ ಮಸೀದಿಯ ಸಿಸಿ ಕೆಮರಾದಲ್ಲಿ ದೃಶ್ಯ ಸೆರೆಯಾಗಿದೆ. ನೂರಾರೂ ಜನ ಕಾರು ಶೋಧ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು . ಕಾರು ಪತ್ತೆಯಾಗಿದ್ದು, ಕಾರ್ಯಚರಣೆ ನಡೆಸುತ್ತಿರುವಾಗ ಅದು ಮತ್ತೇ ಪ್ರವಾಹಕ್ಕೆ ಸಿಕ್ಕಿ ಕೊಚ್ಚಿಕೊಂಡು ಹೋಗಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಕುಮಾರಧಾರಾ ನದಿ ಸೇರುವ ಗೌರಿ‌ ಹೊಳೆ ಕಟ್ಟಿರುವ ಸೇತುವೆ ಅಪಘಾತದ ವೇಗಕ್ಕೆ ತಡೆಬೇಲಿ ಜಖಂ ಆಗಿದೆ. ಮೂರು ಕಂಬಗಳು ಮುರಿದು ಕಬ್ಬಿಣ ನೇತಾಡುತ್ತಿದೆ. ಕಾರು ಮತ್ತು ಕಾರಿನಲ್ಲಿದ್ದವರು ನಾಪತ್ತೆಯಾಗಿದ್ದು, ನೀರಿನಲ್ಲಿ ಕೊಚ್ಚಿಕೊಂಡು ಹೋಗಿರೋ ಶಂಕೆ ವ್ಯಕ್ತವಾಗುತ್ತಿದೆ. ಕಾರು ಕಡಬ ತಾಲೂಕಿನ ಗುತ್ತಿಗಾರು ಮೂಲದ ಮಾರುತಿ-800 ಎಂಬ ಬಗ್ಗೆ ಮಾಹಿತಿ ಲಭಿಸಿದ್ದು, ಸದ್ಯ ಬೋಟ್ ಮೂಲಕ ಶೋಧ ನಡೆಸುತ್ತಿರುವ ಅಗ್ನಿಶಾಮಕ ದಳ ಹಾಗೂ ಸ್ಥಳೀಯರು ಕಾರು ಪತ್ತೆ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಪುತ್ತೂರು ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments