ರಸ್ತೆ ಬದಿ ನಿಂತಿದ್ದವರ ಮೇಲೆ ಹರಿದ ಕಾರು, ಇಬ್ಬರು ದುರ್ಮರಣ!

Webdunia
ಸೋಮವಾರ, 7 ಆಗಸ್ಟ್ 2023 (12:04 IST)
ಹಾವೇರಿ : ಊರಿಗೆ ತೆರಳಲು ರಸ್ತೆ ಬದಿ ನಿಂತಿದ್ದವರ ಮೇಲೆ ಕಾರು ಹರಿದು ಇಬ್ಬರು ಭೀಕರವಾಗಿ ಮೃತಪಟ್ಟ ಘಟನೆ ಜಿಲ್ಲೆಯ ಶಿಗ್ಗಾಂವಿ ತಾಲೂಕಿನ ನೀರಲಗಿ ಗ್ರಾಮದ ಬಳಿ ಇರುವ ಪೂನಾ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 48ರಲ್ಲಿ ನಡೆದಿದೆ.
 
ಮೃತರನ್ನು ವಿರುಪಾಕ್ಷಪ್ಪ ಕಾಳಿ (60) ಮತ್ತು ಚಿದಾನಂದ ಕುರುಬರ (53) ಎಂದು ಗುರುತಿಸಲಾಗಿದೆ. ಇಬ್ಬರೂ ನೀರಲಗಿ ಗ್ರಾಮದಿಂದ ಶಿಗ್ಗಾಂವಿ ಪಟ್ಟಣಕ್ಕೆ ಹೋಗಲು ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ನಿಂತಿದ್ದರು. ಆಗ ವೇಗವಾಗಿ ಬಂದ ಕಾರು ಇಬ್ಬರ ಮೇಲೆ ಹರಿದು ದುರ್ಘಟನೆ ಸಂಭವಿಸಿದೆ.

ವಿರುಪಾಕ್ಷಪ್ಪ ಕಾಳಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಗಂಭೀರವಾಗಿ ಗಾಯಗೊಂಡಿದ್ದ ಚಿದಾನಂದ ಕುರುಬರ ಸಮಯಕ್ಕೆ ಸರಿಯಾಗಿ ಅಂಬುಲೆನ್ಸ್ ಬಾರದ ಕಾರಣ ಮೃತಪಟ್ಟಿದ್ದಾರೆ. ಅಪಘಾತದ ನಂತರ ಸರಿಯಾದ ಸಮಯಕ್ಕೆ ಅಂಬುಲೆನ್ಸ್ ಬಾರದ್ದರಿಂದ ಆಕ್ರೋಶಗೊಂಡ ಸ್ಥಳೀಯರು ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಿ ಪ್ರತಿಭಟನೆ ನಡೆಸಿದ್ದಾರೆ. ಒಂದು ಗಂಟೆಗೂ ಹೆಚ್ಚು ಕಾಲ ಹೆದ್ದಾರಿ ತಡೆದು ತಮ್ಮ ಆಕ್ರೋಶ ಹೊರಹಾಕಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Delhi Air Pollution, ರೇಖಾ ಗುಪ್ತಾ ಈ ಬಗ್ಗೆ ಮಹತ್ವದ ಹೇಳಿಕೆ

ಆದಿಚುಂಚನಗಿರಿ ಸ್ವಾಮೀಜಿಗಳ ಸಮ್ಮುಖದಲ್ಲೇ ಕ್ಷಮೆಯಾಚಿಸಿದ ಎಚ್‌ಡಿ ಕುಮಾರಸ್ವಾಮಿ

ಇದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಬಾಬ್ರಿ ಮಸೀದಿ ನಿರ್ಮಾಣಕ್ಕೆ ಕಬೀರ್ ಅಡಿಪಾಯ

ಗ್ಯಾರಂಟಿ ಯೋಜನೆ ಜಾರಿ ಹಿಂದಿನ ಗುಟ್ಟು ಬಿಚ್ಚಿಟ್ಟ ಸಿಎಂ ಸಿದ್ದರಾಮಯ್ಯ

ನ್ಯಾಷನಲ್‌ ಹೆರಾಲ್ಡ್‌ ಪ್ರಕರಣದಲ್ಲಿ ಕರ್ನಾಟಕ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ಗೆ ಸಂಕಷ್ಟ

ಮುಂದಿನ ಸುದ್ದಿ
Show comments