Select Your Language

Notifications

webdunia
webdunia
webdunia
webdunia

ಮದ್ದೂರಿನಲ್ಲಿ ಭಾಷಣ ಮಾಡಿದ ಬಿಜೆಪಿ ನಾಯಕ ಸಿಟಿ ರವಿ ಮೇಲೆ ಬಿತ್ತು ಕೇಸ್

ಮದ್ದೂರು ಗಣೇಶ ಹಬ್ಬ

Sampriya

ಮಂಡ್ಯ , ಗುರುವಾರ, 11 ಸೆಪ್ಟಂಬರ್ 2025 (18:22 IST)
ಮಂಡ್ಯ: ಮದ್ದೂರು ಪಟ್ಟಣದಲ್ಲಿ ಬುಧವಾರ ನಡೆದ ‘ಗಣೇಶ ಮೂರ್ತಿಗಳ ಸಾಮೂಹಿಕ ವಿಸರ್ಜನಾ ಮೆರವಣಿಗೆ’ ವೇಳೆ ಪ್ರಚೋದನಾಕಾರಿ ಭಾಷಣ ಮಾಡಿದ ಆರೋಪದಡಿಯಲ್ಲಿ ಬಿಜೆಪಿ ನಾಯಕ ಸಿಟಿ ರವಿ ವಿರುದ್ಧ ಇದೀಗ ಪ್ರಕರಣ ದಾಖಲಾಗಿದೆ. 

ಮದ್ದೂರು ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದಾರೆ. 

ಶೇ 5ರಷ್ಟು ಇದ್ದಾಗಲೇ ಬಾಲ ಬಿಚ್ಚುತ್ತಿದ್ದಾರೆ, ಇನ್ನು ಶೇ 50ರಷ್ಟು ಆದಲ್ಲಿ ನಮ್ಮ ಮಕ್ಕಳು, ಮೊಮ್ಮಕ್ಕಳು ಬದುಕುವುದಕ್ಕೆ ಆಗುತ್ತಾ? ಕೆಲವು ಕುತಂತ್ರಿಗಳು ಓಟಿನ ಆಸೆಗಾಗಿ ಹಿಂದೂ ಸಮಾಜವನ್ನು ಒಡೆಯುತ್ತಾರೆ ಎಂದು ಮುಸ್ಲಿಂ ಜನಾಂಗದ ಮೇಲೆ ದ್ವೇಷ ಉಂಟು ಮಾಡುವಂತೆ ಮಾತನಾಡಿದ್ದಾರೆ ಎಂದು ಸಬ್‌ ಇನ್‌ಸ್ಪೆಕ್ಟರ್‌ ಮಂಜುನಾಥ ಕೆ. ದೂರಿನಲ್ಲಿ ಉಲ್ಲೇಖಿಸಿದ್ದಾರೆ. 


ಮುಸಲ್ಮಾನರು ಪಾಕಿಸ್ತಾನ್‌ ಜಿಂದಾಬಾದ್ ಅಂದ್ರು, ಬಾಂಬ್ ಹಾಕಿದ್ರು ಎಲ್ಲದಕ್ಕೂ ಎಸ್.ಎಸ್. ಅಂತಾರೆ. ರಾಮಮಂದಿರದಲ್ಲಿ ಪೆಟ್ರೋಲ್ ಬಾಂಬ್ ಹಾಕಿದ್ದಾಗಲೇ ಮುಸ್ಲಿಂರಿಗೆ ಬುದ್ದಿ ಕಲಿಸಬೇಕಿತ್ತು. ಅವತ್ತು ಕಲಿಸಿದ್ದರೆ ಇಂದು ಈ ರೀತಿ ಪರಿಸ್ಥಿತಿ ಬರುತ್ತಿರಲಿಲ್ಲ. ನೀವು ಹೊರಗಡೆಯಿಂದ ಬಂದವರು, ನಾವು ಇಲ್ಲೇ ಇರುವವರು. ತೊಡೆ ತಟ್ಟೋ ಕೆಲಸ ಮಾಡಬೇಡಿ. ತೊಡೆ ಮುರಿತೀವಿ. ತಲೆನೂ ತೆಗಿತೀವಿ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

‘ಕಲ್ಲು ಹೊಡೆದವರನ್ನು, ಕಲ್ಲಿನ ಒಳಗಡೆ ಸಮಾಧಿ ಮಾಡೋ ತಾಕತ್ತು ಹಿಂದೂ ಸಮಾಜಕ್ಕೆ ಇದೆ’ ಎಂದು ಅನ್ಯ ಸಮುದಾಯಗಳ ಮಧ್ಯೆ ದ್ವೇಷ ಉಂಟು ಮಾಡುವ ಮತ್ತು ಸೌಹಾರ್ದ ಭಾವನೆಗಳಿಗೆ ಭಾದಕವಾಗುವಂತೆ ವೈರತ್ವ, ದ್ವೇಷ ಉಂಟಾಗುವಂತೆ ಭಾಷಣ ಮಾಡಿದ್ದಾರೆ’ ಎಂದು ದೂರಿನಲ್ಲಿ ತಿಳಿಸಿಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ವಿಪತ್ತು ಪೀಡಿತ ಪ್ರದೇಶಗಳ ಸಮೀಕ್ಷೆಗೆ ಉತ್ತರಾಖಂಡಕ್ಕೆ ಬಂದಿಳಿದ ಪ್ರಧಾನಿ