Publish Date: Tue, 24 Oct 2023 (17:22 IST)
Updated Date: Tue, 24 Oct 2023 (16:08 IST)
ಕರ್ನಾಟಕದಾದ್ಯಂತ ಅಕ್ಟೋಬರ್ 29ರಿಂದ ಎರಡು ದಿನಗಳ ಕಾಲ ಕೆಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಕನ್ನಡ, ಉಡುಪಿ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಕರಾವಳಿ ಮತ್ತು ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ, ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರೆಯಲಿದೆ.