Publish Date: Wed, 09 Nov 2022 (20:26 IST)
Updated Date: Wed, 09 Nov 2022 (20:32 IST)
ಶಾಸಕ ರೇಣುಕಾಚಾರ್ಯ ಸಹೋದರನ ಪುತ್ರ ನಿಗೂಢ ಸಾವು ಪ್ರಕರಣ ಸಂಬಂಧ ಇಂದು ಸಿಎಂ ಬಸವರಾಜ ಬೊಮ್ಮಾಯಿ, ರೇಣುಕಾಚಾರ್ಯ ನಿವಾಸಕ್ಕೆ ಭೇಟಿ ನೀಡಿದ್ರು. ದಾವಣಗೆರೆಯ ಹೊನ್ನಾಳಿಯಲ್ಲಿರುವ ರೇಣುಕಾಚಾರ್ಯ ನಿವಾಸಕ್ಕೆ ಭೇಟಿ ನೀಡಿದ ಸಿಎಂ ಬೊಮ್ಮಾಯಿ, ಮೃತ ಚಂದ್ರಶೇಖರ್ ಕುಟುಂಬಕ್ಕೆ ಸಾಂತ್ವನ ಹೇಳಿದ್ರು. ಪೊಲೀಸರು ಎಲ್ಲಾ ಆಯಾಮಗಳಲ್ಲೂ ತನಿಖೆ ಮಾಡ್ತಿದ್ದಾರೆ. ಇನ್ನೆರಡು ದಿನಗಳಲ್ಲಿ ಪೋಸ್ಟ್ ಮಾರ್ಟಂ, FSL ವರದಿ ಬರಲಿದೆ. ಇದು ಕೊಲೆಯೂ ಆಗಿರಬಹುದು, ಅಪಘಾತವೂ ಆಗಿರಬಹುದು. ಸೂಕ್ತ ತನಿಖೆ ನಂತರವಷ್ಟೇ ಸತ್ಯಾಂಶ ಹೊರಬರಲಿದೆ ಎಂದು ದಾವಣಗೆರೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ರು.