Select Your Language

Notifications

webdunia
webdunia
webdunia
webdunia

ರಾಮಮಂದಿರ ನಿರ್ಮಾಣಕ್ಕಾಗಿ ಜಾಗೃತ ಸಮಾವೇಶ: ಪೊಲೀಸರೊಂದಿಗೆ ವಾಗ್ವಾದ

ರಾಮಮಂದಿರ ನಿರ್ಮಾಣಕ್ಕಾಗಿ ಜಾಗೃತ ಸಮಾವೇಶ: ಪೊಲೀಸರೊಂದಿಗೆ ವಾಗ್ವಾದ
ವಿಜಯಪುರ , ಸೋಮವಾರ, 3 ಡಿಸೆಂಬರ್ 2018 (15:34 IST)
ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕಾಗಿ ಜನಾಗ್ರಹ ಸಭೆ ನಡೆಯಿತು. ಸಭೆ ಆರಂಭಕ್ಕೂ ಮುನ್ನ ಪೊಲೀಸರ ಜತೆ ಆಯೋಜಕರು ವಾಗ್ವಾದ ನಡೆಸಿದ ಘಟನೆಯೂ ನಡೆಯಿತು.

ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕಾಗಿ ವಿಜಯಪುರ ನಗರದ ಶಿವಾಜಿ ವೃತ್ತದಲ್ಲಿ ಜನಾಗ್ರಹ ಸಭೆ ನಡೆಯಿತು.  ವಿಜಯಪುರ ನಗರದ ಶಿವಾಜಿ ವೃತ್ತದಲ್ಲಿ ನಡೆದ ಸಭೆ ಆರಂಭಕ್ಕೂ ಮುನ್ನ ಕಾರ್ಯಕ್ರಮ ಆಯೋಜಕರು “ಬನಾಯೇಂಗೇ ‌ ಮಂದಿರ್” ಹಾಡನ್ನು ಸ್ಪೀಕರ್ ನಲ್ಲಿ ಹಾಕಿದರು. ಈ ಸಮಯದಲ್ಲಿ ಕಾರ್ಯಕ್ರಮ ಆಯೋಜಕರು ಹಾಗೂ ಪೊಲೀಸರ ನಡುವೆ ವಾಗ್ವಾದ ನಡೆದು ಕೆಲ ಕಾಲ ಗೊಂದಲದ ವಾತಾವರಣ ನಿರ್ಮಾಣವಾಯಿತು.

ನಗರದ ಶಿವಾಜಿ ವೃತ್ತದಲ್ಲಿ ವಿ.ಹೆಚ್.ಪಿ‌ ಹಾಗೂ ಭಜರಂಗದಳ ಸಂಘಟನೆಗಳಿಂದ ಸಭೆ  ನಡೆಯುತ್ತಿದ್ದು, ಪೊಲೀಸರು ಹಾಡು ನಿಲ್ಲಿಸುವಂತೆ ಸೂಚಿಸಿದರು. ಆದರೆ  ಪೊಲೀಸರ ಮನವಿಗೆ ಸ್ಪಂದಿಸದ ವಿ.ಹೆಚ್.ಪಿ ಕಾರ್ಯಕರ್ತರು ಹಾಡು ಹಾಕಿದರು. ಇದರಿಂದ ಕಾರ್ಯಕರ್ತರು ಹಾಗೂ ಪೊಲೀಸರ ನಡುವೆ ಮಾತಿನ ಚಕಮಕಿ ನಡೆಯಿತು. ಕೆಲ ಸಮಯದ ಬಳಿಕ ಮುಖಂಡರು ಮಧ್ಯಪ್ರವೇಶದ ಬಳಿಕ ಪರಿಸ್ಥಿತಿ ತಿಳಿಗೊಳಿಸಿದರು. ಕಾರ್ಯಕ್ರಮ ಆರಂಭಕ್ಕೂ ಮುನ್ನ ಶಿವಾಜಿ ಮಹಾರಾಜ್ ಹಾಗೂ ಶ್ರೀ ರಾಮನ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡುವ ಮೂಲಕ ಕಾರ್ಯಕ್ರಮ ಆರಂಭಿಸಿದರು.

ಕಾರ್ಯಕ್ರಮದಲ್ಲಿ ಬಸವಲಿಂಗ ಸ್ವಾಮಿ, ಮಹಾದೇವ ಶಿವಾಚಾರ್ಯ ಸ್ವಾಮೀಜಿ, ಯೋಗೇಶ್ವರಿ ಮಾತಾಜಿ ಮುಂತಾದವರು ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ಮಾತನಾಡಿದ  ಶಂಕರಲಿಂಗ ಮಠದ ಸೋಮಲಿಂಗ ಸ್ವಾಮಿ ನಾವು ರಾಮ ಮಂದಿರ ನಿರ್ಮಾಣ ಮಾಡುವಾಗ ಯಾರಾದರೂ ಮುಸ್ಲಿಂ ಗಳು ತಡೆಯಲು ಬಂದರೆ ಶಿವಾಜಿ ಮಹಾರಾಜರು ನಮಗೆ ತಲವಾರ ನೀಡಿದ್ದಾರೆ ಎಂದು ಆಕ್ರೋಶ ಹೊರಹಾಕಿದರು. ಇದೇ ಸಂದರ್ಭದಲ್ಲಿ ಕಾಶ್ಮೀರ ನಮ್ಮ ತಲೆ, ನಮ್ಮ ತಲೆ ತಗೆಯಲು ಬಂದರೆ ನಾವು ಯಾವುದೇ ಕಾರಣಕ್ಕೂ ಬಿಡಲ್ಲ ಎಂದು ವಾಗ್ದಾಳಿ ನಡೆಸಿದರು.

ಸಂಸದ ರಮೇಶ ಜಿಗಜಿಣಗಿ, ಮಾಜಿ ಸಚಿವ ಅಪ್ಪಾಸಾಹೇಬ್ ಪಟ್ಟಣಶೆಟ್ಟಿ ಮುಂತಾದವರು ಉಪಸ್ಥಿತರಿದ್ದರು.



Share this Story:

Follow Webdunia kannada

ಮುಂದಿನ ಸುದ್ದಿ

ಸಾಮಾಜಿಕ ಜಾಲತಾಣಗಳಲ್ಲಿ ಹುಲಿ ಬಂತು ಹುಲಿ, ಸುಳ್ಳು ಸುದ್ದಿಗೆ ಬೆಚ್ಚಿಬಿದ್ದ ಜನ