Publish Date: Wed, 02 Jan 2019 (15:28 IST)
Updated Date: Wed, 02 Jan 2019 (15:30 IST)
ಸರಕಾರಿ ಶಾಲೆಯಲ್ಲಿ ಕುಕ್ಕರ್ ಸ್ಫೋಟಗೊಂಡು ವಿದ್ಯಾರ್ಥಿನಿಯೊಬ್ಬಳು ಗಾಯಗೊಂಡಿದ್ದಾಳೆ.
ಮಂಡ್ಯ ಜಿಲ್ಲೆ ಸರ್ಕಾರಿ ಶಾಲೆಯಲ್ಲಿ ಕುಕ್ಕರ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆ.ಆರ್. ಆಸ್ಪತ್ರೆಗೆ ಮಂಡ್ಯ ಜಿಲ್ಲಾ ಉಸ್ತುವಾರಿ ಸಿ.ಎಸ್.ಪುಟ್ಟರಾಜು ಭೇಟಿ ನೀಡಿದರು.
ಕುಕ್ಕರ್ ಸ್ಫೋಟ ಪರಿಣಾಮ ಸುಟ್ಟ ಗಾಯಗಳಿಂದ ಬಳಲುತ್ತಿರುವ ವಿದ್ಯಾರ್ಥಿನಿಯ ಆರೋಗ್ಯ ವಿಚಾರಣೆ ಮಾಡಿದರು.
ಪಾಂಡವಪುರದ ಸಂಗಾಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ನಡೆದಿದ್ದ ಅವಘಡದಲ್ಲಿ ನಾಲ್ಕನೇ ತರಗತಿ ವಿದ್ಯಾರ್ಥಿನಿ ಸಿಂಚನಾ ಗಾಯಗೊಂಡಿದ್ದಳು.
ವಿದ್ಯಾರ್ಥಿನಿ ಪ್ರಾಣಾಪಾಯದಿಂದ ಪಾರಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾಳೆ.
ಬಿಸಿಯೂಟ ಕೇಂದ್ರಕ್ಕೆ ಮಕ್ಕಳು ತೆರಳದಂತೆ ಅಗತ್ಯ ಸೂಚನೆ ನೀಡಲಾಗಿದೆ. ಸಿಂಚನಾಳಿಗೆ ಸೂಕ್ತ ಚಿಕಿತ್ಸೆ ಕೊಡಿಸಲಾಗುತ್ತದೆ ಎಂದು ಕೆ.ಆರ್. ಆಸ್ಪತ್ರೆಯಲ್ಲಿ ಸಚಿವ ಪುಟ್ಟರಾಜು ಹೇಳಿಕೆ ನೀಡಿದ್ದಾರೆ.