Publish Date: Fri, 20 Jan 2023 (20:57 IST)
Updated Date: Fri, 20 Jan 2023 (21:00 IST)
ಕರ್ತವ್ಯ ನಿರತ ಸರ್ಕಲ್ ಇನ್ಸ್ಪೆಕ್ಟರ್ ಕತ್ತಿನ ಪಟ್ಟಿ ಹಿಡಿದು ಹಲ್ಲೆ ಮಾಡಿದ ಆರೋಪ ಹಿನ್ನೆಲೆ ಮಾಜಿ ಕಾರ್ಪೋರೇಟರ್ ವಿ ಬಾಲಕೃಷ್ಣರನ್ನ ಕಗ್ಗಲಿಪುರ ಪೊಪೀಸ್ರು ಬಂಧಿಸಿದ್ದಾರೆ.ವಾರ್ಡ್ ನಂಬರ್ 185 ಯಲಚೇನಹಳ್ಳಿ ವಾರ್ಡ್ ಮಾಜಿ ಕಾರ್ಪೋರೇಟರ್ ಆಗಿದ್ದ ಬಾಲಕೃಷ್ಣ ಜಮೀನು ವ್ಯಾಜ್ಯ ವಿಚಾರವಾಗಿ ಮಾತನಾಡಲು ನಿನ್ನೆ ಸಂಜೆ ಕಗ್ಗಲೀಪುರ ಠಾಣೆಗೆ ತೆರಳಿದ್ರು. ಈ ವೇಳೆ ಸರ್ಕಲ್ ಇನ್ಸ್ಪೆಕ್ಟರ್ ವಿಜಯ ಕುಮಾರ್ ಜೊತೆಗೆ ಮಾತಿನ ಚಕಮಕಿ ನಡೆದಿದೆ ಆ ಸಮಯದಲ್ಲಿ ಸರ್ಕಲ್ ಇನ್ಸ್ಪೆಕ್ಟರ್ ವಿಜಯ್ ಕುಮಾರ್ ಕತ್ತಿನ ಪಟ್ಟಿ ಹಿಡಿದು ನಡೆಸಿ ಬಾಲಕೃಷ್ಣ ಹಲ್ಲೆ ನಡೆಸಿದ್ದಾರೆಂದು ದೂರು ದಾಖಲಾಗಿದೆ.
ಐಪಿಸಿ ಸೆಕ್ಷನ್ 353, 332 ಅಡಿ ಪ್ರಕರಣ ದಾಖಲಾಗಿದ್ದು ,IPC 353 ಕರ್ತವ್ಯ ನಿರತ ಸರ್ಕಾರಿ ಅಧಿಕಾರಿ ಮೇಲೆ ಹಲ್ಲೆ ಹಾಗೂ IPC 332 ಸರ್ಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸುವ ಆರೋಪದಡಿ ಕೇಸ್ ದಾಖಲಾಗಿದ್ದು ಇಂದು ಬಾಲಕೃಷ್ಣರನ್ನ ಕೋರ್ಟ್ ಗೆ ಹಾಜರುಪಡಿಸಲಿದ್ದಾರೆ.