Daily Horoscope
✕

ಒಂದೇ ಸೀರೆಗೆ ನೇಣು ಬಿಗಿದುಕೊಂಡು ದಂಪತಿ ಆತ್ಮಹತ್ಯೆ!

Webdunia
ಭಾನುವಾರ, 18 ಸೆಪ್ಟಂಬರ್ 2022 (10:20 IST)
ಚಿಕ್ಕಬಳ್ಳಾಪುರ : ತಾಲೂಕಿನ ಸೂಲಿಕುಂಟೆ ಗ್ರಾಮದಲ್ಲಿ ದಂಪತಿ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು, ಜಮೀನು ವಿವಾದದ ಹಿನ್ನೆಲೆ ಒಂದೇ ಸೀರೆಯಲ್ಲಿ  ಗಂಡ, ಹೆಂಡತಿ ಇಬ್ಬರು ನೇಣು ಬಿಗಿದುಕೊಂಡು ಏಕಕಾಲದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಮೃತರ ಸಂಬಂಧಿಕರು ತಿಳಿಸಿದ್ದಾರೆ.

ಗ್ರಾಮದ ಚಂದ್ರಶೇಖರ್(32) ಹಾಗೂ ಶಶಿಕಲಾ(25) ಮೃತ ದುರ್ದೈವಿಗಳು. ಮನೆಯಲ್ಲಿನ ಮೇಲ್ಛಾವಣಿಯ ಸಿಮೆಂಟ್ ಶೀಟ್ ಕೆಳಗೆ ಅಡ್ಡಲಾಗಿ ಹಾಕಿರುವ ಕಬ್ಬಿಣದ ಪೈಪ್ಗೆ ಒಂದೇ ಸೀರೆಯನ್ನು ಎರಡು ಕಡೆ ನೇತು ಹಾಕಿ ಸೀರೆಯ ಎರಡು ಬದಿಗಳ ಕಡೆ ಒಬ್ಬೊಬ್ಬರು ಕುತ್ತಿಗೆಗೆ ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಈ ಘಟನೆ ಕುರಿತಂತೆ ಸಂಬಂಧಿಕರು ಹೇಳುವ ಪ್ರಕಾರ ಗ್ರಾಮದ ಸಂಬಂಧಿಕರೇ ಆದ ಕುಂಟನಾರಾಯಣಪ್ಪ 10 ಗುಂಟೆ ಜಮೀನನ್ನು ಮೃತ ಚಂದ್ರಶೇಖರ್ ತಾಯಿ ಜಯಮ್ಮಗೆ ಮಾರಾಟ ಮಾಡಿದ್ದರು.

ಆದರೆ ಅದೇ ಜಮೀನನ್ನು ಕುಂಟ ನಾರಾಯಣಪ್ಪ ಹನುಮಂತಪ್ಪ ಎಂಬವರಿಗೆ ನೋಂದಣಿ ಮಾಡಿದ್ದಾರಂತೆ. ಇದರಿಂದ ಕೋರ್ಟ್ ಕಚೇರಿ ಅಂತ ಅಲೆದಾಡಿದ್ದ ಚಂದ್ರಶೇಖರ್ ಮನನೊಂದು ಶನಿವಾರ ಹೆಂಡತಿ ಜೊತೆಗೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಅಂತ ತಿಳಿಸಿದ್ದಾರೆ.

ಇದೀಗ ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಈ ಪ್ರಕರಣ ಸಂಬಂಧ ದೂರು ದಾಖಲಾಗಿದೆ. ಇನ್ನೂ ಇಂದು ಸಹ ಗ್ರಾಮದಲ್ಲಿ ಇದೇ ಜಮೀನು ವಿಚಾರವಾಗಿ ನ್ಯಾಯ ಪಂಚಾಯತಿಗೂ ನಿರ್ಧಾರ ಮಾಡಲಾಗುತ್ತಿತ್ತು. ಆದರೆ ನ್ಯಾಯ ಪಂಚಾಯತಿಗೂ ಮುನ್ನವೇ ದಂಪತಿ ನೇಣಿಗೆ ಶರಣಾಗಿದ್ದಾರೆ. ಇನ್ನೂ ಮಕ್ಕಳಾಗಲಿಲ್ಲ ಎಂದು ನೊಂದು ಆತ್ಮಹತ್ಯೆ ಮಾಡಿಕೊಳ್ಳಲಿಲ್ಲ.

ಮದುವೆಯಾಗಿ 4 ವರ್ಷ ಕಳೆದಿದ್ದು, ಗಂಡ ಹೆಂಡತಿ ಅನ್ಯೋನ್ಯವಾಗಿದ್ದರು ಅಂತ ಹೇಳಿದ್ದಾರೆ. 
ಶನಿವಾರ ಸಂಜೆಯಾದರೂ ಮನೆಯಿಂದ ಗಂಡ ಹಾಗೂ ಹೆಂಡತಿ ಹೊರಬಾರದ ಕಾರಣ ಅಕ್ಕ ಪಕ್ಕದ ಮನೆಯವರು ಕಿಟಕಿ ಮೂಲಕ ಇಣುಕಿ ನೋಡಿದಾಗ ಘಟನೆ ಬೆಳಕಿಗೆ ಬಂದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿಯಲ್ಲಿ ಯಾರನ್ನೋ ಮೆಚ್ಚಿಸಲು ಎಸ್.ಐ.ಆರ್ ಪ್ರಕ್ರಿಯೆ ವಿರುದ್ಧ ಸಿಎಂ ಮಾತು: ಅಶ್ವಥ್ ನಾರಾಯಣ

ಭಾರತೀಯ ಮೂಲದ ನವಿ ಪಿಳ್ಳೈಗೆ ಒಲಿದ 2026ರ ನೋಬೆಲ್ ಶಾಂತಿ ಪ್ರಶಸ್ತಿ

ರಾಜ್ಯದಲ್ಲಿ ಆರ್ಥಿಕ ತುರ್ತು ಪರಿಸ್ಥಿತಿ ಎದುರಾಗಿದೆ: ಬಿ.ವೈ.ವಿಜಯೇಂದ್ರ

ಸಿಇಸಿ ವಿರುದ್ಧ ಪ್ರತಿಭಟನೆಗೆ ಯತ್ನ: ಕಾಕ್ರೋಚ್ ಜನತಾ ಪಾರ್ಟಿಗೆ ಪೊಲೀಸರಿಂದ ಬಿಗ್ ಶಾಕ್

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments