Webdunia - Bharat's app for daily news and videos

Install App

ಫುಟ್‌ಪಾತ್‌ ಮೇಲೆ ವಾಹನ ಚಲಾಯಿಸಿದವರ ಮೇಲೆ ಕ್ರಿಮಿನಲ್‌ ಕೇಸ್‌ ದಾಖಲು- ಟ್ರಾಫಿಕ್ ಪೊಲೀಸರಿಂದ ಎಚ್ಚರಿಕೆ

Webdunia
ಶುಕ್ರವಾರ, 28 ಡಿಸೆಂಬರ್ 2018 (12:20 IST)
ಬೆಂಗಳೂರು : ಇನ್ನುಮುಂದೆ ಫುಟ್‌ಪಾತ್‌ ಮೇಲೆ ವಾಹನ ಚಲಾಯಿಸಿದರೆ ಕ್ರಿಮಿನಲ್‌ ಕೇಸ್‌ ದಾಖಲಿಸುವುದರ ಜೊತೆಗೆ ಬಾರೀ ದಂಡ ವಿಧಿಸಲಾಗುತ್ತದೆ ಎಂಬುದಾಗಿ ಟ್ರಾಫಿಕ್ ಪೊಲೀಸರು ಎಚ್ಚರಿಕೆ ನೀಡಿದ್ದಾರೆ.


ನಗರದಲ್ಲಿ ಫುಟ್‌ಪಾತ್‌ ಮೇಲೆ ವಾಹನ ಚಲಾಯಿಸುವವರ ಸಂಖ್ಯೆ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಕಾರ್ಯಾಚರಣೆ ತೀವ್ರಗೊಳಿಸಿರುವ ಟ್ರಾಫಿಕ್ ಪೊಲೀಸರು ಈ ಕ್ರಮ ಕೈಗೊಂಡಿದ್ದು ಕ್ರಿಮಿನಲ್‌ ಕೇಸ್‌ ದಾಖಲಿಸಿದ ಬಳಿಕ 2500 ರೂ. ದಂಡ ಕಟ್ಟಬೇಕು, ಇಲ್ಲದಿದ್ದರೆ ಜೈಲು ಶಿಕ್ಷೆ ಎದುರಿಸಬೇಕಾಗುತ್ತದೆ ಎಂದು ತಿಳಿಸಿದ್ದಾರೆ.


ಹಾಗೇ ಫುಟ್‌ಪಾತ್‌ ಮೇಲೆ ಬೈಕ್‌ ಓಡಿಸುವವರು ವಾಹನ ದಾಖಲೆ, ಡಿಎಲ್‌, ವಿಮೆ, ಮಾಲಿನ್ಯ ತಪಾಸಣೆ ಪ್ರಮಾಣಪತ್ರ ಹೊಂದಿರಲೇಬೇಕು. ಇಲ್ಲದಿದ್ದರೆ ವಾಹನ ಜಪ್ತಿ ಮಾಡಿ ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಲಾಗುತ್ತದೆ. ನ್ಯಾಯಾಲಯದಲ್ಲೇ ದಂಡ ಕಟ್ಟಬೇಕಾಗುತ್ತದೆ. ಅಲ್ಲದೆ, ಡಿಎಲ್‌ ಕೂಡ ರದ್ದು ಮಾಡಲು ಸಾರಿಗೆ ಇಲಾಖೆಗೆ ಪತ್ರ ಬರೆಯಲಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments