Publish Date: Tue, 07 Feb 2023 (17:52 IST)
Updated Date: Tue, 07 Feb 2023 (18:16 IST)
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ 108 ನಮ್ಮ ಕ್ಲಿನಿಕ್‌ಗಳಿಗೆ ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚಾಲನೆ ನೀಡಿದರು. ಮಹಾಲಕ್ಷ್ಮಿ ಲೇಔಟ್‌ನ ಮಹಾಲಕ್ಷ್ಮೀಪುರಂ ವಾರ್ಡ್‌ನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಈ ಚಿಕಿತ್ಸಾಲಯಗಳು ಉದ್ಘಾಟಿಸಿದರು.ಬಳಿಕ ಮಾತನಾಡಿದ ಅವರು, ಚಿಕಿತ್ಸಾಲಯಗಳಲ್ಲಿ, ರೆಫರಲ್ ಸೌಲಭ್ಯಗಳು ಸಹ ಲಭ್ಯವಿರುತ್ತವೆ ಮತ್ತು ಹೆಚ್ಚಿನ ಚಿಕಿತ್ಸೆಯ ಅಗತ್ಯವಿರುವ ರೋಗಿಗಳನ್ನು ದ್ವಿತೀಯ ಮತ್ತು ತೃತೀಯ ಕೇಂದ್ರಗಳಿಗೆ ದಾಖಲಿಸಲಾಗುತ್ತದೆ. ಇದು ಚಿಕಿತ್ಸೆಯ ವೆಚ್ಚವನ್ನು ಕಡಿಮೆ ಮಾಡುವುದಲ್ಲದೆ ಆರೋಗ್ಯವನ್ನು ನೀಡುತ್ತದೆ. ಪ್ರತಿ ನಮ್ಮ ಕ್ಲಿನಿಕ್‌ನಲ್ಲಿ ಒಬ್ಬ ವೈದ್ಯರು, ಒಬ್ಬ ಶುಶ್ರೂಷಾ ಸಿಬ್ಬಂದಿ, ಒಬ್ಬ ಲ್ಯಾಬ್ ಟೆಕ್ನಿಷಿಯನ್ ಮತ್ತು ಒಬ್ಬ ಡಿ-ಗ್ರೂಪ್ ವರ್ಕರ್ ಇರುತ್ತಾರೆ ಎಂದು ಅವರು ವಿವರಿಸಿದರು