Daily Horoscope

Select Your Language

Notifications

webdunia
webdunia
webdunia
webdunia

ಆತ್ಮಹತ್ಯೆಗೆ ಶರಣಾದ ಡೆಂಟಲ್ ವಿದ್ಯಾರ್ಥಿನಿ, ಇದೇ ಕಾರಣಕ್ಕೆ ಪ್ರಾಣ ಕಳೆದುಕೊಂಡ್ಳ ಯುವತಿ

Bommanahalli Dental Student Suicide Case
ಬೆಂಗಳೂರು: ಬೊಮ್ಮನಹಳ್ಳಿಯ ಪ್ರತಿಷ್ಠಿತ ಖಾಸಗಿ ಡೇಂಟಲ್ ಕಾಲೇಜಿನಲ್ಲಿ ಮೂರನೇ ವರ್ಷದಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆಗೆ ಶರಣಾಗಿರುವ ಬಗ್ಗೆ ಭಾರೀ ಅನುಮಾನ ವ್ಯಕ್ತವಾಗಿದೆ. ಇದೀಗ ವಿದ್ಯಾರ್ಥಿ ಆತ್ಮಹತ್ಯೆ ಹಿಂದೆ ಡೆಂಟಲ್ ಕಾಲೇಜು ಆಡಳಿತ ಮಂಡಳಿಯ ಕಿರುಕುಳ ಆರೋಪ ವ್ಯಕ್ತವಾಗಿದೆ. 

ಮೃತ ವಿದ್ಯಾರ್ಥಿನಿಯನ್ನು 23 ವರ್ಷದ ಯಶಸ್ವಿನಿ ಎಂದು ಗುರುತಿಸಲಾಗಿದೆ. 

ವಿದ್ಯಾರ್ಥಿನಿ ಸ್ನೇಹಿತರು ನ್ಯಾಯಕ್ಕಾಗಿ ಆಗ್ರಹಿಸಿ ಶವಾಗಾರದ ಮುಂದೆ ಪ್ರತಿಭಟನೆ ನಡೆಸಿದ್ದಾರೆ. ಸೆಮಿನಾರ್ ಗೆ ಅವಕಾಶ ನೀಡದೇ ವಿದ್ಯಾರ್ಥಿನಿಗೆ ಕಾಲೇಜಿನಲ್ಲಿ ಕಿರುಕುಳ ನೀಡಿ ಅವಮಾನ ಮಾಡಲಾಗಿದೆ ಎಂದು ಆರೋಪ ಮಾಡಿದ್ದಾರೆ.


ಕಣ್ಣು ನೋವಿನ ಕಾರಣಕ್ಕೆ ಯಶಸ್ವಿನಿ ಕಳೆದ ಬುಧವಾರ ಕಾಲೇಜಿಗೆ ಹೋಗಿರಲಿಲ್ಲ. ಮರುದಿನ ಕಾಲೇಜಿಗೆ ಹೋದ ವಿದ್ಯಾರ್ಥಿನಿಗೆ ಪ್ರಾಧ್ಯಾಪಕ, ಕಣ್ಣಿಗೆ ಯಾವ ಡ್ರಾಪ್ಸ್ ಹಾಕಿದೆ? ಎಷ್ಟು ಹನಿ ಡ್ರಾಪ್ಸ್ ಹಾಕಿದೆ? ಎಂದೆಲ್ಲಾ ಪ್ರಶ್ನಿಸಿ ಆಕೆಗೆ ನೋವುಂಟು ಮಾಡಿದ್ದಾರೆ. 

ಈ ವಿಚಾರಕ್ಕೆ ಮನನೊಂದು ವಿದ್ಯಾರ್ಥಿನಿ ದುಡುಕಿನ ನಿರ್ಧಾರ ಕೈಗೊಂಡು ಸಾವಿಗೆ ಶರಣಾಗಿದ್ದಾಳೆ. ಮಗಳನ್ನು ಕಳೆದುಕೊಂಡು ಪೋಷಕರು ಕಣ್ಣೀರು ಹಾಕುತ್ತಿದ್ದಾರೆ. ತನ್ನ ಮಗಳನ್ನು ಅವಮಾನಿಸಿದ ಕಾಲೇಜಿನ ಪ್ರಾಂಶುಪಾಲ ಹಾಗೂ ಪ್ರಾಧ್ಯಾಪಕರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಈ ವಿಚಾರಕ್ಕೆ ಪ್ರಹ್ಲಾದ್ ಜೋಶಿ ಮೊದಲು ಪ್ರತಿಕ್ರಿಯಿಸಲಿ: ದಿನೇಶ್ ಗುಂಡೂರಾವ್‌