ಪ್ರಧಾನಿ ನರೇಂದ್ರ ಮೋದಿ ನಿವಾಸದ ಬಳಿ ಡ್ರೋನ್ ಪತ್ತೆಯಾಗಿದ್ದು, ತನಿಖೆ ಆರಂಭಗೊಂಡಿದೆ. ಎಸ್ಪಿಜಿ ಸಿಬ್ಬಂದಿಗೆ ಬೆಳಗಿನ ಜಾವ 5.30ರ ಸುಮಾರಿಗೆ ಡ್ರೋನ್ ಕಾಣಿಸಿದೆ. ಎಚ್ಚರಿಕೆಯ ನಂತರ, ದೆಹಲಿ ಪೊಲೀಸರು ಡ್ರೋನ್ ಅನ್ನು ಪತ್ತೆಹಚ್ಚಲು ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದ್ದಾರೆ.ದೆಹಲಿ ಪೊಲೀಸರು ಡ್ರೋನ್ ಪತ್ತೆ ಹಚ್ಚಲು ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ ಆದರೆ ಇದುವರೆಗೆ ಯಾವುದೇ ಡ್ರೋನ್ ಪತ್ತೆಯಾಗಿಲ್ಲ. ಪಿಎಂ ಮೋದಿ ಅವರ ನಿವಾಸವು ರೆಡ್ ನೋ ಫ್ಲೈ ಝೋನ್ ಅಥವಾ ಡ್ರೋನ್ ಝೋನ್ ಅಡಿಯಲ್ಲಿ ಬರುತ್ತದೆ. ದೆಹಲಿ ಪೊಲೀಸರ ಪ್ರಕಾರ, ಪ್ರಧಾನಿ ನರೇಂದ್ರ ಮೋದಿ ಅವರ ನಿವಾಸದ ಬಳಿ ಅಪರಿಚಿತ ಹಾರುವ ವಸ್ತುವೊಂದರ ಬಗ್ಗೆ ಎನ್‌ಡಿಡಿ ನಿಯಂತ್ರಣ ಕೊಠಡಿಯಲ್ಲಿ ಮಾಹಿತಿ ಬಂದಿದೆ. ಈವರೆಗೆ ಪೊಲೀಸರು ಮತ್ತು ಇತರ ಭದ್ರತಾ ಏಜೆನ್ಸಿಗಳ ಸಿಬ್ಬಂದಿ ಪಿಎಂ ಮೋದಿ ನಿವಾಸದ ಬಳಿ ಅನುಮಾನಾಸ್ಪದವಾಗಿ ಏನನ್ನೂ ಕಂಡುಕೊಂಡಿಲ್ಲ. ಏರ್ ಟ್ರಾಫಿಕ್ ಕಂಟ್ರೋಲ್ ರೂಮ್ ಸಹ ಏನನ್ನೂ ಪತ್ತೆ ಮಾಡಿಲ್ಲ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.