Publish Date: Mon, 01 Oct 2018 (17:37 IST)
Updated Date: Mon, 01 Oct 2018 (17:39 IST)
ಬೇಡಿಕೆ ಈಡೇರಿಕೆಗಾಗಿ ಒತ್ತಾಯಿಸಿ ಜಿಲ್ಲಾಧಿಕಾರಿ ಕಚೇರಿಗೆ ರೈತರಿಂದ ಮುತ್ತಿಗೆ ಹಾಕುವ ಕಾರ್ಯಕ್ರಮ ವಿಫಲವಾಯಿತು.
ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಡಿಸಿ ಕಚೇರಿಗೆ ಮುತ್ತಿಗೆ ಹಾಕಲು ರೈತರು ಯತ್ನ ಮಾಡಿದ ಘಟನೆ ಬೀದರ್ ನಲ್ಲಿ ನಡೆದಿದೆ.
ಬೀದರ್ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ ಮಾಡುತ್ತಿದ್ದ ರೈತರನ್ನು ಪೊಲೀಸರು ತಡೆದು ನಿಲ್ಲಿಸಿದರು.
ಎಸ್.ಪಿ ಹಾಗೂ ಜಿಲ್ಲಾಧಿಕಾರಿ ಸ್ಥಳಕ್ಕೆ ದೌಡಾಯಿಸಿ ಪರಿಸ್ಥಿತಿ ನಿಯಂತ್ರಣಕ್ಕೆ ತಂದರು.
ಜಿಲ್ಲಾಧಿಕಾರಿ ಮುಂದೆ ತಮ್ಮ ಅಸಹಾಯಕತೆ ಹಂಚಿಕೊಂಡ ನೂರಾರು ರೈತರು, ಬೇಡಿಕೆಗೆ ಸ್ಪಂದಿಸಿ ಪರಿಹಾರ ಕಲ್ಪಿಸುವಂತೆ ಕೋರಿದರು.
ಬೀದರ್ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ರೈತರಿಂದ ಮುತ್ತಿಗೆ ಯತ್ನ ನಡೆಯಿತು. ಅಹಿತಕರ ಘಟನೆ ನಡೆಯದಂತೆ ಡಿಸಿ ಕಚೇರಿ ಮುಂಭಾಗ ಪೊಲೀಸ್ ಸರ್ಪಗಾವಲು ಹಾಕಲಾಗಿತ್ತು.