Select Your Language

Notifications

webdunia
webdunia
webdunia
webdunia

ಪುತ್ರ ಡಾ. ಯತೀಂದ್ರ ವಿರುದ್ಧ ಆಧಾರ ರಹಿತವಾದ ಸುಳ್ಳು ದೂರು: ಸಿಎಂ

ಪುತ್ರ ಡಾ. ಯತೀಂದ್ರ ವಿರುದ್ಧ ಆಧಾರ ರಹಿತವಾದ ಸುಳ್ಳು ದೂರು: ಸಿಎಂ
ಮೈಸೂರು , ಮಂಗಳವಾರ, 9 ಮೇ 2017 (19:27 IST)
ಪುತ್ರ ಡಾ.ಯತೀಂದ್ರ ವಿರುದ್ಧ ಆದಾಯ ತೆರಿಗೆ ಇಲಾಖೆಯಲ್ಲಿ ಸಲ್ಲಿಸಲಾದ ದೂರು ಆಧಾರರಹಿತವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
 
ಡಾ.ಯತೀಂದ್ರ ಮೊಟ್ಟಮೊದಲ ಬಾರಿಗೆ ವಿದೇಶ ಪ್ರವಾಸ ಮಾಡಿದ್ದಾನೆ. ಮೊದಲ ಬಾರಿಯ ಪ್ರವಾಸದಲ್ಲಿ ವಿದೇಶದಲ್ಲಿ ಹೂಡಿಕೆ ಮಾಡಲು ಹೇಗೆ ಸಾಧ್ಯ ಎಂದು ತಿರುಗೇಟು ನೀಡಿದರು.
 
ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಮಾಜಿ ಸಂಸದೆ ಎಚ್.ವಿಶ್ವನಾಥ್ ಅವರ ಬಗ್ಗೆ ಹೈಕಮಾಂಡ್ ಅಂತಿಮ ನಿರ್ಧಾರ ಕೈಗೊಳ್ಳಲಿದೆ. ಪಕ್ಷದಲ್ಲಿ ಕೆಲವರಿಗೆ ಅಸಮಾಧಾನವಿರಬಹುದು. ಆದರೆ.ಯಾರೂ ಪಕ್ಷ ತೊರೆಯುವುದಿಲ್ಲ ಎನ್ನುವ ವಿಶ್ವಾಸವಿದೆ ಎಂದರು.
 
ಮಾಜಿ ಸಂಸದ ವಿಶ್ವನಾಥ್ ನನ್ನ ವಿರುದ್ಧ ಹಲವಾರು ಆರೋಪಗಳನ್ನು ಮಾಡಿದ್ದಾರೆ. ಆದರೆ, ಅವರು ಹಿರಿಯ ನಾಯಕರಾಗಿರುವುದರಿಂದ ಅವರ ಹೇಳಿಕೆಗಳಿಗೆ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಕಾಂಗ್ರೆಸ್ ಪಕ್ಷ ಬಿಡುವ ಪ್ರಶ್ನೆಯೇ ಇಲ್ಲ: ಸತೀಶ್ ಜಾರಕಿಹೊಳಿ