Select Your Language

Notifications

webdunia
webdunia
webdunia
webdunia

ಸರಕಾರಕ್ಕೆ ಎಚ್ಚರಿಕೆ ನೀಡಿದ ರೈತ ನಾಯಕಿ

ಸರಕಾರಕ್ಕೆ ಎಚ್ಚರಿಕೆ ನೀಡಿದ ರೈತ ನಾಯಕಿ
ಬಾಗಲಕೋಟೆ , ಶುಕ್ರವಾರ, 23 ನವೆಂಬರ್ 2018 (16:43 IST)
ರೈತ ಹೋರಾಟದಲ್ಲಿ ತೊಡಗಿಕೊಂಡಿರುವ ನಾಯಕಿ ಜಯಶ್ರೀ, ಸಿಎಂ ಹಾಗೂ ಸರಕಾರಕ್ಕೆ ಗಡುವು ನೀಡಿದ್ದಾರೆ.
ಕಬ್ಬು ಬೆಳೆಗಾರರಿಗೆ ಬರಬೇಕಾದ ಬಾಕಿ ಹಣ 15 ದಿನಗಳಲ್ಲಿ ಕೊಡಿಸಬೇಕ ಎಂದು ರೈತ ಮುಖಂಡರಾದ ಜಯಶ್ರೀ ಆಗ್ರಹ ಮಾಡಿದ್ದಾರೆ.

ಬಾಗಲಕೋಟೆ ಜಿಲ್ಲೆಯ ಮುಧೋಳದಲ್ಲಿ ನಡೆದ ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ ಅವರು, ಹದಿನೈದು ದಿನಗಳಲ್ಲಿ ನಮ್ಮ ಬೇಡಿಕೆಗೆ ಸರಕಾರ ಸ್ಪಂದನೆ ನೀಡಬೇಕು. ಇಲ್ಲದಿದ್ದರೆ ಮತ್ತೆ ಬೀದಿಗೆ ಇಳಿದು ಹೋರಾಟವನ್ನು ರೂಪಿಸಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.

ಮುಧೋಳದ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಧರಣಿನಿರತ ರೈತರು, ಸಕ್ಕರೆ ಕಾಖಾನೆಯ ಮಾಲೀಕರೊಂದಿಗೆ ಮುಖ್ಯಮಂತ್ರಿ ಕುಮಾರಸ್ವಾಮಿ ಸಭೆ ವಿಫಲಗೊಂಡ ಹಿನ್ನೆಲೆಯಲ್ಲಿ ತಮ್ಮ ಪ್ರತಿಭಟನೆಯನ್ನು ಮುಂದುವರೆಸಿದ್ದಾರೆ.
ಕುಮಾರಸ್ವಾಮಿ ಸಭೆಯಲ್ಲಿ ಸೂಕ್ತ ನಿರ್ಣಯ ತೆಗೆದುಕೊಂಡಿಲ್ಲ. ಇದರಿಂದ ರೈತರಿಗೆ ಅನ್ಯಾಯವಾಗುತ್ತಿದೆ. ವೃಥಾ ಸಮಯವನ್ನು ವ್ಯರ್ಥ ಮಾಡುತ್ತಿದ್ದು, ಕೂಡಲೇ ಸೂಕ್ತ ನಿರ್ಧಾರಗಳನ್ನು ತೆಗೆದುಕೊಂಡು ನ್ಯಾಯ ಒದಗಿಸಬೇಕೆಂದು ಆಗ್ರಹ ಮಾಡಿದರು.



Share this Story:

Follow Webdunia kannada

ಮುಂದಿನ ಸುದ್ದಿ

ಧರಣಿ ಹಿಂಪಡೆದ ಕಬ್ಬು ಬೆಳೆಗಾರರು: ಸಚಿವ ಡಿ.ಕೆ.ಶಿವಕುಮಾರ ಹೇಳಿದ್ದೇನು ಗೊತ್ತಾ?