Select Your Language

Notifications

webdunia
webdunia
webdunia
Saturday, 5 April 2025
webdunia

ಮೀನು ಹಿಡಿಯುತ್ತಿದ್ದ ವೇಳೆ ಘಟಪ್ರಭಾ ನದಿ ಹಿನ್ನೀರಿನಲ್ಲಿ ಮುಳುಗಿದ ತಂದೆ, ಇಬ್ಬರು ಮಕ್ಕಳು

Ghataprabha River Backwater

Sampriya

ಬೆಳಗಾವಿ , ಸೋಮವಾರ, 18 ನವೆಂಬರ್ 2024 (14:56 IST)
Photo Courtesy X
ಬೆಳಗಾವಿ: ಇಲ್ಲಿನ ಯಮಕನಮರಡಿ ಸಮೀಪದ ಬೆನಕನಹೊಳಿ ಬಳಿ ಘಟಪ್ರಭಾ ನದಿ ಹಿನ್ನೀರಿನ ಪ್ರದೇಶದಲ್ಲಿ ಮೀನು ಹಿಡಿಯಲು ಹೋಗಿದ್ದ ತಂದೆ ಮತ್ತು ಇಬ್ಬರು ಮಕ್ಕಳು ನೀರುಪಾಲಾಗಿದ ಘಟನೆ  ನಡೆದಿದೆ. ಸೋಮವಾರ ಬೆಳಿಗ್ಗೆಯಿಂದ ಅವರಿಗಾಗಿ ಹುಡುಕಾಟ ನಡೆದಿದೆ.

ಬೆನಕನಹೊಳಿಯ ಲಕ್ಷ್ಮಣ ರಾಮ ಅಂಬಲಿ(45), ಅವರ ಮಕ್ಕಳಾದ ರಮೇಶ (15), ಯಲ್ಲಪ್ಪ (13) ಎಂದು ನೀರುಪಾಲಾದವರು

ಮೂಲಗಳ ಪ್ರಕಾರ ತಂದೆ ಲಕ್ಷ್ಮಣ ಹಾಗೂ ಅವರ ಮಕ್ಕಳು ಘಟಪ್ರಭಾ ನದಿ ಸೇತುವೆ ಮೇಲೆ ಭಾನುವಾರ ಸಂಜೆ ಬೈಕ್ ನಿಲ್ಲಿಸಿ, ಮೀನು ಹಿಡಿಯಲು ನದಿ‌ ನೀರಿಗೆ ಇಳಿದಿದ್ದರು. ಆದರೆ, ಸೋಮವಾರ ಬೆಳಿಗ್ಗೆಯವರೆಗೂ ಮನೆಗೆ ಬಾರದಿದ್ದಾಗ ಆತಂಕಗೊಂಡ ಕುಟುಂಬಸ್ಥರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.


ಈ ವೇಳೆ ಮೂವರು ನೀರಿನಲ್ಲಿ ಮುಳುಗಿರುವ ಕುರಿತು ಶಂಕೆ ವ್ಯಕ್ತವಾದ ಹಿನ್ನಲೆಯಲ್ಲಿ ಶೋಧ ಕಾರ್ಯಾಚರಣೆ ನಡೆಸಿದ್ದಾರೆ. ಈಗ ಎನ್.ಡಿ.ಆರ್.ಎಫ್ ತಂಡದವರು ಹಾಗೂ ಯಮಕನಮರಡಿ ಠಾಣೆ ಪೊಲೀಸರು ನೀರುಪಾಲಾಗಿರುವ ಮೂವರ ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಬಿಪಿಎಲ್ ಕಾರ್ಡ್ ನಲ್ಲಿ ನಾಳೆಯಿಂದಲೇ ಬದಲಾವಣೆ: ಇಲ್ಲಿದೆ ಡೀಟೈಲ್ಸ್