ಟಿಕೆಟ್ ಕೊಡದಿದ್ದರೆ ಕಾಂಗ್ರೆಸ್​ಗೆ ಹೋಗುತ್ತೇನೆ ಎಂದ ಬಿಜೆಪಿ ಮಾಜಿ ಶಾಸಕ

Webdunia
ಶನಿವಾರ, 12 ಅಕ್ಟೋಬರ್ 2019 (12:31 IST)
ಕಾಗೆವಾಡ : ಈ ಬಾರಿ ನನಗೆ ಟಿಕೆಟ್ ಕೊಡಿ ಇಲ್ಲವಾದರೆ ಕಾಂಗ್ರೆಸ್​ಗೆ ಹೋಗುತ್ತೇನೆ ಎಂದು ಬಿಜೆಪಿಯ ಮಾಜಿ ಶಾಸಕ ರಾಜು ಕಾಗೆ ಅಸಮಾಧಾನ ಹೊರಹಾಕಿದ್ದಾರೆ.




ಕಾಗೆವಾಡ ಕ್ಷೇತ್ರದ ಅನರ್ಹ ಶಾಸಕ ಶ್ರೀಮಂತ ಪಾಟೀಲ್ ​​ಗೆ ಬಿಜೆಪಿ ಟಿಕೆಟ್ ನೀಡುವ ಹಿನ್ನೆಲೆ, ಬಿಜೆಪಿಯ ಮಾಜಿ ಶಾಸಕ ರಾಜು ಕಾಗೆ ಅವರನ್ನು ಸಮಾಧಾನ ಮಾಡಲು ಕಾಡಾ ನಿಗಮ ಮಂಡಳಿ ಸ್ಥಾನ ನೀಡಲಾಗಿತ್ತು. ಈ ಬಗ್ಗೆ ಬೇಸರ ವ್ಯಕ್ತಪಡಿಸಿದ ಅವರು, ಬಿಜೆಪಿ ನಾಯಕರು ಆಪ್ತರನ್ನು ತಿರಸ್ಕಾರ ಮಾಡಿದ್ದಾರೆ. ಕಾಡಾ ನಿಗಮ ಮಂಡಳಿ ಸ್ಥಾನ ನನ್ನ ಯೋಗ್ಯತೆಗೆ ತಕ್ಕ ಸ್ಥಾನ ಅಲ್ಲ. ನಾನು ನಾಲ್ಕು ಬಾರಿ ಶಾಸಕನಾಗಿ ಕೆಲಸ ಮಾಡಿದ ವ್ಯಕ್ತಿ. ಒಬ್ಬ ಜಿಲ್ಲಾ ಪಂಚಾಯತ್​ ಸದಸ್ಯನಿಗೆ ನೀಡುವ ಸ್ಥಾನವನ್ನು ನನಗೆ ಕೊಟ್ಟಿದ್ದಾರೆ  ಎಂದು ಕಿಡಿಕಾರಿದ್ದಾರೆ.


ಅನರ್ಹ ಶಾಸಕ ಶ್ರೀಮಂತ ಪಾಟೀಲ್​ ಟಿಕೆಟ್​ ನೀಡಲು ನನಗೆ ನಿಗಮ ಮಂಡಳಿ ಸ್ಥಾನ ನೀಡಲಾಗಿದೆ. ನನಗೆ ಟಿಕೆಟ್ ಕೊಡಿ, ಇಲ್ಲವಾದರೆ ಕಾಂಗ್ರೆಸ್ ​ಗೆ ಹೋಗುತ್ತೇನೆ. ಈಗಾಗಲೇ ಕಾಂಗ್ರೆಸ್ ​ನವರು ನನ್ನನ್ನು ಸಂಪರ್ಕ ಮಾಡಿದ್ದಾರೆ. ಸಿದ್ದರಾಮಯ್ಯ ಜೊತೆ ಮಾತುಕತೆ ನಡೆಸಿದ್ದೇನೆ. ಪಕ್ಷದಲ್ಲಿ ಸರಿಯಾದ ಸ್ಥಾನಮಾನ ನೀಡದೆ ಹೋದಲ್ಲಿ ಮುಂದಿನ ತೀರ್ಮಾನ ಕೈಗೊಳ್ಳುತ್ತೇನೆ ಎಂದು ಖಡಕ್ ಆಗಿ ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಬದಲಾವಣೆ ಸಾಧ್ಯನೇ ಇಲ್ಲ: ಬಸನಗೌಡ ಪಾಟೀಲ್

ಬಿಗ್ ಶಾಕ್‌, ಬಾವಿಗೆ ಹಾರಿ ಒಂದೇ ಕುಟುಂಬದ ನಾಲ್ವರು ಸಾವು

ದರೋಡೆಕೋರರ ಬೆಂಗಳೂರೇ, ಹಳ್ಳದ ಬೆಂಗಳೂರೇ, ಕಸದ ಬೆಂಗಳೂರೇ: ಆರ್.ಅಶೋಕ್

ಬಾಂಗ್ಲಾದೇಶದಲ್ಲಿ ಸಂಭವಿಸಿದ ಭೂಕಂಪಕ್ಕೆ ಕೋಲ್ಕತ್ತಾದಲ್ಲೂ ಶೇಕ್‌

ಮುನ್ಸೂಚನೆಯಂತೆ ಸಿಲಿಕಾನ್ ಸಿಟಿಗೆ ತಂಪೆರೆದ ವರುಣ

ಮುಂದಿನ ಸುದ್ದಿ
Show comments