ಜನರ ಜೇಬಿಗೆ ಮತ್ತೆ ಕತ್ತರಿ ಹಾಕಲು ಸಿದ್ಧವಾದ ಸರ್ಕಾರ; ಸಾರಿಗೆ ಸಚಿವ ನೀಡಿದ ಸುಳಿವೇನು

Sampriya
ಶನಿವಾರ, 24 ಆಗಸ್ಟ್ 2024 (14:05 IST)
Photo Courtesy X
ಬೆಂಗಳೂರು: ಪೆಟ್ರೋಲ್, ಡೀಸೆಲ್‌ ಮೇಲಿನ ಸುಂಕವನ್ನು ಹೆಚ್ಚಿಸಿದ್ದ ರಾಜ್ಯ ಸರ್ಕಾರ ಇದೀಗ ಬಸ್‌ ಪ್ರಯಾಣ  ದರವನ್ನು ಏರಿಕೆ ಮಾಡಲು ಮುಂದಾಗಿದೆ. ಕೆಎಸ್‌ಆರ್‌ಟಿಸಿ ಬಸ್ ದರ ಶೀಘ್ರದಲ್ಲೇ ಜಾಸ್ತಿಯಾಗಲಿದೆ. ಈ ಬಗ್ಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಸುಳಿವು ನೀಡಿದ್ದಾರೆ.

ಬಿಜೆಪಿ ಸರ್ಕಾರ ಕಳೆದ 5 ವರ್ಷಗಳಲ್ಲಿ ಸಾರಿಗೆ ಸಂಸ್ಥೆಗಳನ್ನು ₹ 5900 ಕೋಟಿ ನಷ್ಟದಲ್ಲಿಟ್ಟು ಹೋಗಿದೆ., ಈಗ ಸಾರಿಗೆ ಸಂಸ್ಥೆಗಳ ಪಾಡೇನು ಎಂಬುದರ ಬಗ್ಗೆ ತಾವು ಉತ್ತರ ನೀಡುವಿರಾ ಎಂದು ಪ್ರತಿಪಕ್ಷ ನಾಯಕ ಆರ್‌. ಅಶೋಕ್‌ ವಿರುದ್ಧ ಕಿಡಿಕಾರಿದ್ದಾರೆ.

ಅಶೋಕ್‌ ಹೇಳಿದ್ದೇನು?: ಬಸ್ ದರ ಏರಿಕೆಗೆ ಹೊಸ ಆಯೋಗ. ಪಿಕ್ ಪಾಕೆಟ್ ಸರ್ಕಾರದ ಹೊಸ ಪ್ರಯೋಗ. ಅಧಿಕಾರಕ್ಕೆ ಬಂದ ದಿನದಿಂದ ಬೆಲೆ ಏರಿಕೆ, ತೆರಿಗೆ ಹೆಚ್ಚಳ ಅಂತ ಒಂದಲ್ಲ ಒಂದು ರೀತಿ ಜನ ಸಾಮಾನ್ಯರ ಸುಲಿಗೆ ಮಾಡುತ್ತಿರುವ ಕಾಂಗ್ರೆಸ್‌ ಸರ್ಕಾರ ಈಗ ಬಸ್ ದರ ಏರಿಕೆಗೆ ಪ್ರತ್ಯೇಕ ಆಯೋಗ ರಚಿಸಿ ಪಿಕ್ ಪಾಕೆಟ್ ಗಾಗಿ ಹೊಸ ಪ್ರಯೋಗ ಮಾಡಲು ಹೊರಟಿದೆ. ಆಡಳಿತ ಮಾಡುವಲ್ಲಿ ಮೂರು ಕಾಸು ಪ್ರಯೋಜನ ಇಲ್ಲದಿದ್ದರೂ ಜನರಿಗೆ ಮಂಕು ಬೂದು ಎರಚಿ ಹೊಸ ಪ್ರಯೋಗಗಳ ಮೂಲಕ ಜನರನ್ನ ಸುಲಿಗೆ ಮಾಡುವಲ್ಲಿ ಕಾಂಗ್ರೆಸ್ ಪಕ್ಷದವರು ಬಹಳ ನಿಸ್ಸೀಮರು ಎಂದು ಟ್ವೀಟ್‌ ಮಾಡಿದ್ದರು. ಇದಕ್ಕೆ ರಾಮಲಿಂಗಾ ರೆಡ್ಡಿ ತಿರುಗೇಟು ನೀಡಿದ್ದಾರೆ.

ಜುಲೈ 14 ರಂದು ಕೆಎಸ್‌ಆರ್‌ಟಿಸಿ ನಿಗಮದ ಅಧ್ಯಕ್ಷ, ಗುಬ್ಬಿ ಶಾಸಕ ಎಸ್.ಆರ್.ಶ್ರೀನಿವಾಸ್, ಕಳೆದ ತ್ರೈಮಾಸಿಕದಲ್ಲಿ₹  295 ಕೋಟಿ ನಷ್ಟವಾಗಿದೆ. ಟಿಕೆಟ್‌ ದರ ಏರಿಸದೇ ಇದ್ದರೆ ಕೆಎಸ್‌ಆರ್‌ಟಿಸಿ ಸಂಸ್ಥೆ ಉಳಿಯುವುದಿಲ್ಲ ಎಂದು ಹೇಳಿದ್ದರು. ಸದ್ಯದಲ್ಲೇ ಕೆಎಸ್‌ಆರ್‌ಟಿಸಿ ಬಸ್ ಟಿಕೆಟ್ ದರ ಹೆಚ್ಚಳ ಮಾಡಲಾಗುವುದು. ಮೊನ್ನೆ ನಿಗಮದ ಮೀಟಿಂಗ್ ಮುಗಿದಿದ್ದು ₹ 15-20 ದರ ಹೆಚ್ಚಳ ಮಾಡುವ ಪ್ರಸ್ತಾವನೆಯನ್ನು ಸಿಎಂ ಮುಂದೆ ಇಟ್ಟಿದ್ದೇವೆ ಎಂದು ಮಾಹಿತಿ ನೀಡಿದ್ದರು.

ಪ್ರತಿ ಬಾರಿಯೂ ನಷ್ಟವನ್ನು ಸರಿದೂಗಿಸಿಕೊಡುವಂತೆ ಸರ್ಕಾರವನ್ನು ಕೇಳುವುದು ಸರಿಯಲ್ಲ. ನಷ್ಟವನ್ನು ಸರಿದೂಗಿಸಲು ಹಾಗೂ ಸಂಸ್ಥೆಯನ್ನು ಉಳಿಸಬೇಕಾದರೆ ಟಿಕೆಟ್ ದರ ಹೆಚ್ಚಿಗೆ ಮಾಡಲೇಬೇಕು ಎಂದು ಸಮಜಾಯಿಷಿ ಕೊಟ್ಟಿದ್ದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Video: ಬೆಂಗಳೂರಿಗೆ ಬರುತ್ತಿದ್ದ ಬಸ್ ಬೆಂಕಿಗೆ ಆಹುತಿ: 20 ಮಂದಿ ಸಜೀವ ದಹನ

ಅಬ್ಬಾ ಮರಣ ಕ್ಷಣದಲ್ಲಿ ಮನುಷ್ಯನಿಗೆ ಏನೆಲ್ಲಾ ಆಗುತ್ತದೆ: ಈ ವಿದ್ವಾಂಸರು ಏನು ಹೇಳಿದ್ದಾರೆ ವಿಡಿಯೋ ನೋಡಿ

Karnataka Weather: ಇಂದು ಯಾವೆಲ್ಲಾ ಜಿಲ್ಲೆಗಳಿಗೆ ಭಾರೀ ಮಳೆ ಸಾಧ್ಯತೆ ಇಲ್ಲಿದೆ ವಿವರ

ರಾಜವಂಶಸ್ಥ, ಸಂಸದ ಯದುವೀರ್ ಅವರ ಅಜ್ಜ ಮದನ್ ಗೋಪಾಲ್ ಇನ್ನಿಲ್ಲ

ಸಿಎಂ ಕುರ್ಚಿ ರೇಸ್‌ನಲ್ಲಿ ನೀವಿದ್ದೀರಾ ಎಂದಿದ್ದಕ್ಕೆ ಪರಮೇಶ್ವರ್ ಪ್ರತಿಕ್ರಿಯೆ ಹೀಗಿತ್ತು

ಮುಂದಿನ ಸುದ್ದಿ
Show comments