Publish Date: Fri, 21 Jan 2022 (15:54 IST)
Updated Date: Fri, 21 Jan 2022 (15:57 IST)
ಸಿಎಂ ಪ್ರಧಾನ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ ಮತ್ತು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಗುರುವಾರ ವಿಕಾಸ ಸೌಧದ ಕಚೇರಿಯಲ್ಲಿ ಭೇಟಿಯಾಗಿ ಒಂದು ಗಂಟೆ ಕಾಲ ಚರ್ಚೆ ನಡೆಸಿರುವುದು ಚರ್ಚೆಗೆ ಗ್ರಾಸವಾಗಿದೆ.
ಇವರಿಬ್ಬರೂ ಬಳಿಕ ರೇಸ್ಕೋರ್ಸ್ ನಿವಾಸದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾಗಿದ್ದರು. ಈ ಸಂದರ್ಭದಲ್ಲಿ ಕೆಲ ಸಚಿವರ ಕಾರ್ಯ ವೈಖರಿ ಸೇರಿದಂತೆ ಇತರೆ ವಿಚಾರಗಳ ಬಗ್ಗೆ ಸಿಎಂ ಗಮನ ಸೆಳೆಯುವ ಪ್ರಯತ್ನ ನಡೆಸಿದರು ಎಂದು ತಿಳಿದುಬಂದಿದೆ.