Select Your Language

Notifications

webdunia
webdunia
webdunia
webdunia

ನಗರದಲ್ಲಿ ಗುಜುರಿ ಅಂಗಡಿ ಬೆಂಕಿಗಾಹುತಿ

ಬೆಂಕಿಗಾಹುತಿ
ಬೆಂಗಳೂರು :  ಗುಜರಿ ಅಂಗಡಿಯೊಂದು ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ ಸುಟ್ಟು ಕರಕಲಾಗಿರುವ ಘಟನೆ ನಾಯಂಡನ ಹಳ್ಳಿ ಬಳಿಯ ಗಂಗೊಂಡನಹಳ್ಳಿ ಬಳಿ ಶನಿವಾರ ಬೆಳಗ್ಗೆ 5.30 ಕ್ಕೆ ನಡೆದಿದೆ. ಅವಘಡದಲ್ಲಿ ಅಂಗಡಿಯಲ್ಲಿದ್ದ ಎಲ್ಲಾ ವಸ್ತುಗಳೂ ಸಂಪೂರ್ಣ ಸುಟ್ಟು, ಭಾರೀ ಪ್ರಮಾಣದ ನಷ್ಟವುಂಟಾಗಿದೆ.
 
ಶಾರ್ಟ್‌ ಸರ್ಕೀಟ್‌ ನಿಂದ ಅಗ್ನಿಅವಘಡ ಸಂಭವಿಸಿರಬಹುದೆಂದು ಶಂಕೆ ವ್ಯಕ್ತವಾಗಿದೆ.ಅಗ್ನಿ ಅವಘಡದ ಮಾಹಿತಿ ತಿಳಿಯುತ್ತಿದ್ದಂತೆಯೇ ನಾಲ್ಕು ಅಗ್ನಿಶಾಮಕ ದಳದ ವಾಹನಗಳು ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದೆ. ಸುದೈವವಶಾತ್‌ ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. 

Share this Story:

Follow Webdunia kannada

ಮುಂದಿನ ಸುದ್ದಿ

ಈಶ್ವರಪ್ಪ ನಿವಾಸಕ್ಕೆ ಕೈ ಕಾರ್ಯಕರ್ತರ ಮುತ್ತಿಗೆ