Select Your Language

Notifications

webdunia
webdunia
webdunia
webdunia

ಕಾಡಾನೆಗಳ ಹಿಂಡು.. ಜನರಲ್ಲಿ ಭಯ..!.,

wild animals
ಹಾಸನ , ಶುಕ್ರವಾರ, 27 ಅಕ್ಟೋಬರ್ 2023 (20:43 IST)
ಒಂದೇ ಗುಂಪಿನಲ್ಲಿ ಸುಮಾರು ಮೂವತ್ತಕ್ಕೂ ಹೆಚ್ಚು ಕಾಡಾನೆಗಳು ಗುಂಪು ಗುಂಪಾಗಿ ಓಡಾಡುತ್ತಿರುವ ಘಟನೆ ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಅಂಕಿಹಳ್ಳಿ ಪೇಟೆ ಗ್ರಾಮದಲ್ಲಿ ನಡೆದಿದೆ.

ಕಾಡಾನೆಗಳ ಸಂಚಾರದ ದೃಶ್ಯಾವಳಿಗಳು ಸ್ಥಳೀಯರ ಮೊಬೈಲ್​ನಲ್ಲಿ ಸೆರೆಯಾಗಿದೆ. ಬೇಲೂರು, ಸಕಲೇಶಪುರ, ಆಲೂರು ತಾಲ್ಲೂಕಿನ ಹಲವೆಡೆ ಕಾಡಾನೆಗಳು ಬೀಡುಬಿಟ್ಟಿವೆ. ಮಲೆನಾಡಿಗರು ಕಾಡಾನೆಗಳ ಹಿಂಡು ಕಂಡು ಪ್ರತಿನಿತ್ಯ ಆತಂಕಕ್ಕೆ ಒಳಗಾಗುತ್ತಿದ್ದಾರೆ. ಕಾಡಾನೆ ದಾಂಧಲೆಯಿಂದ ಅಪಾರ ಪ್ರಮಾಣದ ಬೆಳೆಹಾನಿಯಾಗಿದೆ. ಕೂಲಿ ಕೆಲಸಕ್ಕೆ ಕಾರ್ಮಿಕರು ಮನೆಯಿಂದ ಹೊರಬಾರದ ಸ್ಥಿತಿ ನಿರ್ಮಾಣವಾಗಿದೆ. ಕೂಡಲೇ ಕಾಡಾನೆ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸಿ ಎಂದು ಆಗ್ರಹಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಸಚಿವ ಜ್ಯೋತಿಪ್ರಿಯ ಮಲ್ಲಿಕ್ ಬಂಧನ